ಮದ್ದೂರು: ಮೂರನೇ ಆಷಾಢ ಶುಕ್ರವಾರ ಹಿನ್ನಲೆ ಮದ್ದೂರು ಪಟ್ಟಣದ ಬೆಂ-ಮೈ ಹೆದ್ದಾರಿಯ ಅದಿದೇವತೆ ಶ್ರೀ ಮದ್ದೂರಮ್ಮ ದೇವಿಗೆ ವಿಶೇಷ ಬೆಣ್ಣೆ ಅಲಂಕಾರ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವರ ದರ್ಶನಕ್ಕೆ ನೂರಾರು ಭಕ್ತರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದಿದ್ದಾರೆ.
ದೇವಾಲಯಕ್ಕೆ ಭೇಟಿ ನೀಡಿದ ಭಕ್ತಾದಿಗಳಿಗೆ ಮುಖಂಡ ಯಶ್ವಂತ್ ನೇತೃತ್ವದಲ್ಲಿ ಅನ್ನ ಸಂತರ್ಪಣೆ ಮಾಡಲಾಯಿತು.