ಬೆಂಗಳೂರು: ಆಪ್ತನ ಮನೆಯಲ್ಲಿ ೪.೮ ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.
ಚಿಕ್ಕಬಳ್ಳಾಪುರದ ಫ್ಲೈಯಿಂಗ್ ಸ್ಕ್ವಾಡ್ಸ್ ತಂಡ (ಎಫ್‌ಎಸ್‌ಟಿ) ಕ್ರಮ ಕೈಗೊಂಡಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. ೪. ೮ ಕೋಟಿ ಮೌಲ್ಯದ ನಗದನ್ನು ಚಿಕ್ಕಬಳ್ಳಾಪುರದ ಎಫ್‌ಎಸ್‌ಟಿ ವಶಪಡಿಸಿಕೊಂಡಿರುವುದಾಗಿ ಇಂದು ಶುಕ್ರವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ. ಚುನಾವಣಾ ಆಯೋಗ ಒಟ್ಟು ೫೦ ಕೋಟಿ ರೂಪಾಯಿ ಮೌಲ್ಯದ ನಗದು, ಮದ್ಯ, ಮಾದಕ ವಸ್ತು ಮತ್ತು ಉಡುಗೊರೆಗಳನ್ನು ವಶಪಡಿಸಿಕೊಂಡಿದೆ.