Friday, April 18, 2025
Google search engine

Homeಸ್ಥಳೀಯ40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ

40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ

ಮಂಡ್ಯ: ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಕಾರ್ಖಾನೆ ಇದುವರೆಗೂ 40 ಕೋಟಿ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದೆ.

2000ದ ಇಸವಿಯಿಂದಲೂ ಇಲ್ಲಿಯವೆರೆಗೆ ಕರೆಂಟ್​ ಬಿಲ್ ಕಟ್ಟಿಲ್ಲವೆಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕಾರ್ಖಾನೆ ಪುನಾರಂಭಕ್ಕೆ 50 ಕೋಟಿ ರೂ. ಹಣವನ್ನ ಬಿಡುಗಡೆ ಮಾಡಿತ್ತು.

ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಟನ್ ಕಬ್ಬನ್ನು ನುರಿಯುವ ಗುರಿ ಹೊಂದಿರುವ ಈ ಕಾರ್ಖಾನೆಗೆ ವಿದ್ಯುತ್ ಸರಬರಾಜು ಆಗಬೇಕಿದೆ. ಈ ಹಿನ್ನಲೆ ವಿದ್ಯುತ್ ಪೂರೈಕೆ ಮಾಡುವಂತೆ ಇಂಧನ ಸಚಿವರಿಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ವರ್ಷ ರೈತರ ಕಬ್ಬು ಅರೆಯಲು ರೈತರೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಮೈಶುಗರ್ ಹಲವು ವರ್ಷದಿಂದ ನಷ್ಟಕ್ಕೆ ಸಿಲುಕಿ 40.86 ಕೋಟಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದೆ. ಪ್ರಸಕ್ತ ಹಂಗಾಮಿನಲ್ಲಿ ಕಬ್ಬನ್ನು ನುರಿಯಲು ಅವಶ್ಯವಿರುವ ವಿದ್ಯುತ್ ಸರಬರಾಜು ಮಾಡಿ, ಬಳಿಕ ಹಂತ ಹಂತವಾಗಿ ಬಾಕಿ ಮೊತ್ತ ಪಾವತಿಸಲಾಗುತ್ತೆ ಎಂದು ಚೆಸ್ಕಾಂ ನಿರ್ದೇಶಕರಿಗೆ ವಿದ್ಯುತ್ ಪೂರೈಸಲು ಆದೇಶಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್​ ಗೆ ಮನವಿ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular