Thursday, April 3, 2025
Google search engine

Homeರಾಜ್ಯಸುದ್ದಿಜಾಲಪೌರ ಕಾರ್ಮಿಕರ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 400 ಮಂದಿ ಭಾಗಿ : ಅನಿಲ್ ಕುಮಾರ್

ಪೌರ ಕಾರ್ಮಿಕರ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 400 ಮಂದಿ ಭಾಗಿ : ಅನಿಲ್ ಕುಮಾರ್

ಮಂಗಳೂರು ದಕ್ಷಿಣ ಕನ್ನಡ: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘವು ಎಪ್ರಿಲ್ 3ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದೆ. ದೇಶದ ವಿವಿಧ ಭಾಗಗಳ ಸುಮಾರು 60 ಸಾವಿರ ಪೌರಕಾರ್ಮಿಕರು ಭಾಗವಹಿಸುವರು. ನಮ್ಮ ಜಿಲ್ಲೆಯಿಂದ 400 ಮಂದಿ ಭಾಗವಹಿಸಲಿದ್ದೇವೆ ಎಂದು ಸಂಘದ ದ.ಕ. ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತಿಳಿಸಿದರು.

ಮಂಗಳೂರು ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಪೌರಕಾರ್ಮಿಕರನ್ನು ನೇರಪಾವತಿ ವ್ಯವಸ್ಥೆಯಡಿ ತರಲಾಗಿದೆ ಎಂದರು.
ಪಾಲಿಕೆಯ 462 ಪೌರಕಾರ್ಮಿಕರು, ಕಸ ಸಾಗಣೆ ವಾಹನಗಳ 157 ಚಾಲಕರು, 127 ಲೋಡರ್‌ಗಳು ಹಾಗೂ ಜಿಲ್ಲೆಯ ಇತರ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರು ಸೇರಿ ನಮ್ಮ ಜಿಲ್ಲೆಯಲ್ಲಿ 671 ಮಂದಿಯ ಕೆಲಸ ಖಾಯಂಗೊಳ್ಳಬೇಕಿದೆ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಶುಭ ಸುದ್ದಿ ನೀಡುವ ನಿರೀಕ್ಷೆ ಇದೆ ಎಂದರು.

RELATED ARTICLES
- Advertisment -
Google search engine

Most Popular