Monday, April 21, 2025
Google search engine

HomeUncategorizedಕೆಐಎಡಿಬಿ ಹಂಚಿಕೆಯಲ್ಲಿ 4,248 ಕೋಟಿ ರೂ. ಬಾಕಿ: 4 ತಿಂಗಳಲ್ಲಿ ವಸೂಲಿ ಮಾಡುವಂತೆ ಸಚಿವ ಎಂ.ಬಿ...

ಕೆಐಎಡಿಬಿ ಹಂಚಿಕೆಯಲ್ಲಿ 4,248 ಕೋಟಿ ರೂ. ಬಾಕಿ: 4 ತಿಂಗಳಲ್ಲಿ ವಸೂಲಿ ಮಾಡುವಂತೆ ಸಚಿವ ಎಂ.ಬಿ ಪಾಟೀಲ್ ಗಡುವು

ಬೆಂಗಳೂರು: ಉದ್ಯಮ ಸ್ಥಾಪನೆಯ ಉದ್ದೇಶಕ್ಕೆಂದು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿ (ಕೆಐಎಡಿಬಿ) ಈವರೆಗೆ ಹಂಚಿರುವ ನಿವೇಶನಗಳಿಂದ ೪,೨೪೮ ಕೋಟಿ ರೂ.ಗಳಷ್ಟು ಬೃಹತ್ ಬಾಕಿ ಹಣ ಬರಬೇಕಿದೆ. ಇದನ್ನು ಮುಂದಿನ ನಾಲ್ಕು ತಿಂಗಳಲ್ಲಿ ಕಟ್ಟುನಿಟ್ಟಾಗಿ ವಸೂಲಿ ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಗಡುವು ವಿಧಿಸಿದ್ದಾರೆ.

ಖನಿಜ ಭವನದಲ್ಲಿ ಕೆಐಎಡಿಬಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಈ ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ವಿಫಲರಾದರೆ ಮಂಡಲಿಯ ಕಾರ್ಯದರ್ಶಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಕೆಐಎಡಿಬಿ ಆರಂಭವಾದಾಗಿನಿಂದಲೂ ಈ ಸಮಸ್ಯೆ ಇದೆ. ಈಗಿನ ಅಂಕಿ ಅಂಶಗಳ ಪ್ರಕಾರ, ಮಂಡಲಿಯು ಸಾಮಾನ್ಯ ವರ್ಗದವರಿಗೆ ಮಂಜೂರು ಮಾಡಿರುವ ೫,೯೩೨ ಕೈಗಾರಿಕಾ ಘಟಕಗಳಿಂದ ೨,೮೨೫ ಕೋಟಿ ರೂ. ಬರಬೇಕಾಗಿದೆ. ಎಸ್ಸಿ- ಎಸ್ಟಿ ವರ್ಗಗಳ ಅಡಿಯಲ್ಲಿ ೭೪೧ ಕೋಟಿ ರೂ. ಬಾಕಿ ಉಳಿದಿದೆ. ಇದರ ಜತೆಗೆ ಎಸ್ಸಿ- ಎಸ್ಟಿ ವರ್ಗಗಳಿಗೆ ನೀಡುವ ಸಬ್ಸಿಡಿ ಬಾಬ್ತಿನಲ್ಲಿ ೬೮೦ ಕೋಟಿ ಇದೆ ಎಂದು ವಿವರಿಸಿದರು.

ಕೆಐಎಡಿಬಿಯಿಂದ ನಿವೇಶನಗಳನ್ನು ಪಡೆದಿರುವವರಲ್ಲಿ ಎಷ್ಟೋ ಜನ ಈ ನಿವೇಶನಗಳನ್ನು ಹಾಗೆಯೇ ಬಿಟ್ಟುಕೊಂಡಿದ್ದಾರೆ. ಉದ್ಯಮ ಸ್ಥಾಪಿಸಿ ಇನ್ನೇನು ತಮ್ಮ ಹೆಸರಿಗೆ ನಿವೇಶನ ಮಾಡಿಸಿಕೊಳ್ಳುವ ಕೊನೆ ಹಂತದಲ್ಲಿ ಇರುವವರೇ ?೨,೧೦೦ ಕೋಟಿ ಬಾಕಿ ಉಳಿಸಿಕೊಂಡಿದ್ದಾರೆ. ಇಂಥವರ ವಿರುದ್ಧ ನಾಲ್ಕು ತಿಂಗಳೊಳಗೆ ಕಠಿಣ ಕ್ರಮ ಜರುಗಿಸಿ ಬಾಕಿ ಹಣ ವಸೂಲಿ ಮಾಡಲೇಬೇಕು. ಕಾನೂನು ಕ್ರಮದ ಜೊತೆಗೆ ನಿವೇಶನ ಮಂಜೂರಾತಿಯನ್ನೇ ರದ್ದುಪಡಿಸಬೇಕಾದ ನಿಷ್ಠುರತೆಯನ್ನು ಪ್ರದರ್ಶಿಸಲೇಬೇಕಾಗಿದೆ ಎಂದು ವಿವರಿಸಿದರು.

ಬೆಂಗಳೂರಿನ ಬಹುಮಹಡಿ ಕಟ್ಟದಲ್ಲಿ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ರಾಜ್ಯ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಮೃಗಾಲಯ ಪ್ರಾಧಿಕಾರವು ಜೈವಿಕ ಉದ್ಯಾನವನದಲ್ಲಿರುವ ಪ್ರಾಣಿಗಳ ಸಮರ್ಥ ನಿರ್ವಹಣೆಗಾಗಿ ತಾಂತ್ರಿಕ ಷರತ್ತುಗಳನ್ನು ಪೂರೈಸುವಂತೆ ಸಲಹೆ ನೀಡಿದೆ.

ಸಭೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಏಕ್‌ರೂಪ್ ಕೌರ್, ಮಂಗಳೂರಿನ ಮಾಜಿ ಶಾಸಕರಾದ ಜಿ.ಆರ್ ಲೋಬೋ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಐಎಫ್‌ಎಸ್ ಕುಮಾರ್ ಪುಷ್ಕರ್, ಮಂಗಳೂರಿನ ಜಿಲ್ಲಾಧಿಕಾರಿಗಳು, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular