ಮಂಡ್ಯ: 43 ನೇ ರೈತ ಹುತಾತ್ಮರ ದಿನಾಚರಣೆ ಹಿನ್ನಲೆ ವಿವಿಧ ಬೇಡಿಕಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಮಂಡ್ಯದ ಸಿಲ್ವರ್ ಜ್ಯೂಬಲಿ ಪಾರ್ಕ್ ನಿಂದ ಡಿಸಿ ಕಚೇರಿ ವರೆಗೆ ಸಾಂಸ್ಕೃತಿಕ ಕಲಾತಂಡದ ಮೆರವಣಿಗೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಯಿತು.
ರೈತರ ಮೇಲೆ ಸರ್ಕಾರಗಳು ದೌರ್ಜನ್ಯ ನಡೆಸುತ್ತಿದ್ದು, ಇದನ್ನು ತಡೆಯಬೇಕು. ರೈತರ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು. ನಾಲೆಗಳಿಗೆ ನೀರು ಹರಿಸಿ ಬೆಳೆದ ಬೆಳೆ ಉಳಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಸರ್ಕಾರವನ್ನು ರೈತರು ಒತ್ತಾಯಿಸಿದರು.
ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
