Sunday, April 20, 2025
Google search engine

Homeರಾಜಕೀಯಕಾಂಗ್ರೆಸ್ ಅಭ್ಯರ್ಥಿಗಳ ೪ ನೇ ಪಟ್ಟಿ ಬಿಡುಗಡೆ : ಪ್ರಧಾನಿ ಮೋದಿ ವಿರುದ್ಧ ಅಜಯ್ ರೈ

ಕಾಂಗ್ರೆಸ್ ಅಭ್ಯರ್ಥಿಗಳ ೪ ನೇ ಪಟ್ಟಿ ಬಿಡುಗಡೆ : ಪ್ರಧಾನಿ ಮೋದಿ ವಿರುದ್ಧ ಅಜಯ್ ರೈ

ನವದೆಹಲಿ: ಲೋಕಸಭಾ ಚುನಾವಣೆ ೨೦೨೪ ಕ್ಕೆ ಕಾಂಗ್ರೆಸ್ ನ ಅಭ್ಯರ್ಥಿಗಳ ೪ ನೇ ಪಟ್ಟಿ ಬಿಡುಗಡೆಯಾಗಿದೆ.
೪೬ ಲೋಕಸಭಾ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹಾಗೂ ಅಜಯ್ ರೈ ಹಾಗೂ ಕಾರ್ತಿ ಚಿದಂಬರಂ ಅವರನ್ನು ಕಣಕ್ಕೆ ಇಳಿಸಲಾಗಿದೆ. ರಾಜ್‌ಘರ್ ಕ್ಷೇತ್ರದಿಂದ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಅವರನ್ನು ಕಣಕ್ಕೆ ಇಳಿಸಲಾಗಿದ್ದರೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಅಜಯ್ ರೈ ಸ್ಪರ್ಧಿಸಲಿದ್ದಾರೆ.

ಬಿಎಸ್‌ಪಿಯ ಉಚ್ಛಾಟಿತ ನಾಯಕ ಡ್ಯಾನಿಶ್ ಅಲಿ ಅವರನ್ನು ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರದಿಂದ ಕಣಕ್ಕೆ ಇಳಿಸಲಾಗಿದೆ. ಉತ್ತರ ಪ್ರದೇಶದ ಶಾಸಕ ಇಮ್ರಾನ್ ಮಸೂದ್ ಅವರನ್ನು ಸಹರನ್‌ಪುರ ಕ್ಷೇತ್ರ ಹಾಗೂ ಕಾನ್ಪುರದಿಂದ ಅಲೋಕ್ ಮಿಶ್ರಾ ಅವರಿಗೆ ಟಿಕೆಟ್ ನೀಡಲಾಗಿದೆ. ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಪುತ್ರ ವೀರೇಂದ್ರ ರಾವತ್ ಅವರಿಗೆ ಹರಿದ್ವಾರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದ್ದು, ಕಾಂಗ್ರೆಸ್ ಮುಖಂಡ ಪಿಎಲ್ ಪುನಿಯಾ ಅವರ ಪುತ್ರ ತನುಜ್ ಪುನಿಯಾ ಅವರಿಗೆ ಉತ್ತರ ಪ್ರದೇಶದ ಬಾರಾ ಬಂಕಿಯಿಂದ ಲೋಕಸಭೆ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ತಮಿಳುನಾಡಿನ ಶಿವಗಂಗಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರಿಗೆ ತಿರುವಳ್ಳೂರಿನಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.

RELATED ARTICLES
- Advertisment -
Google search engine

Most Popular