Friday, April 4, 2025
Google search engine

HomeUncategorizedರಾಷ್ಟ್ರೀಯಬಂಗಾಳ ಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪನ

ಬಂಗಾಳ ಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪನ

ಹೊಸದಿಲ್ಲಿ: ಬಂಗಾಳಕೊಲ್ಲಿಯಲ್ಲಿ ಮಂಗಳವಾರ ಮುಂಜಾನೆ 6.10ರ ಸುಮಾರಿಗೆ 5.1 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಪ್ರಕಟಿಸಿದೆ.

ಸುಮಾರು 91 ಕಿಲೋಮೀಟರ್ ಆಳದಲ್ಲಿ ಈ ಕಂಪನ ಸಂಭವಿಸಿದ್ದು, ಇದರ ಕೇಂದ್ರ ಬಿಂದು 19.52 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 88.55 ಡಿಗ್ರಿ ಪೂರ್ವ ರೇಖಾಂಶಕ್ಕೆ ಇತ್ತು ಎಂದು ಅಧಿಕೃತ ಮೂಲಗಳು ಹೇಳಿವೆ.

ಭೂಕಂಪದಿಂದ ಆಗಿರುವ ಹಾನಿಯ ಬಗ್ಗೆ ತಕ್ಷಣಕ್ಕೆ ಯಾವುದೇ ವರದಿಗಳು ಬಂದಿಲ್ಲ ಹಾಗೂ ಸುನಾಮಿ ಎಚ್ಚರಿಕೆಯನ್ನೂ ನೀಡಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಕೊಲ್ಕತ್ತಾ ಮಹಾನಗರದಲ್ಲಿ ಮತ್ತು ಪಶ್ಚಿಮ ಬಂಗಾಳದ ವಿವಿಧ ಕಡೆಗಳಲ್ಲಿ ಕೂಡಾ ಕಂಪನದ ಅನುಭವ ಆಗಿದೆ.

RELATED ARTICLES
- Advertisment -
Google search engine

Most Popular