ಬೀದರ್: ಬೀದಿ ನಾಯಿ ದಾಳಿಗೆ 5 ತಿಂಗಳ ಕಂದಮ್ಮ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ.
ಸುಧಾ ಹಾಗೂ ಸಿದ್ದಪ್ಪ ದಂಪತಿಗೆ ಸೇರಿದ, 5 ತಿಂಗಳ ಶಿವಾನಿ ಎಂಬ ಮಗು ಘಟನೆಯಲ್ಲಿ ಸಾವನ್ನಪ್ಪಿದೆ. ಮನೆಯ ಪಡಸಾಲೆಯಲ್ಲಿ ಮಗುವನ್ನ ಮಲಗಿಸಿ ತಾಯಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮನೆಗೆ ನುಗ್ಗಿ ಹಸುಗೂಸನ್ನ ನಾಯಿ ಮನಬಂದಂತೆ ಕಚ್ಚಿ ಬಿಸಾಕಿದೆ.ʼ ಅರೆಜೀವಾವಸ್ಥೆಯಲ್ಲಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಬೀದರ್‌ನ ಬ್ರಿಮ್ಸ್ನಲ್ಲಿ ಸಾವನ್ನಪ್ಪಿದೆ.
ದಂಪತಿಗೆ ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಶಿವಾನಿ ನಾಲ್ಕನೇ ಹೆಣ್ಣು ಮಗುವಾಗಿತ್ತು. ಬೀದಿ ನಾಯಿಗಳಿಗೆ ಕಡಿವಾಣ ಹಾಕದೆ ನಿರ್ಲಕ್ಷ್ಯ ಮಾಡುತ್ತಿರುವ ಹುಮ್ನಾಬಾದ್ ಪುರಸಭೆ ಅಧಿಕಾರಿಗಳ ವಿರುದ್ಧ ಮಗುವಿನ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.



