Wednesday, July 16, 2025
Google search engine

HomeUncategorizedಬಿರುಗಾಳಿ, ಮಳೆಗೆ ಮನೆಯ ಮೇಲ್ಚಾವಣಿ ಕುಸಿದು, 5 ವರ್ಷದ ಬಾಲಕಿ ಸಾವು

ಬಿರುಗಾಳಿ, ಮಳೆಗೆ ಮನೆಯ ಮೇಲ್ಚಾವಣಿ ಕುಸಿದು, 5 ವರ್ಷದ ಬಾಲಕಿ ಸಾವು

ಕಲಬುರ್ಗಿ : ಕಲಬುರ್ಗಿಯಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಬಿರುಗಾಳಿ, ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ಮುತ್ತಕೊಡ ಗ್ರಾಮದಲ್ಲಿ ಕಳೆದ ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತಳನ್ನು ಅಹಾಧ್ಯ ಮಲ್ಲಪ್ಪ ಪಸಪೂರ (5) ಎಂದು ಗುರುತಿಸಲಾಗಿದೆ.

ಮನೆಯೊಳಗೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಏಕಾಏಕಿ ಮೇಲ್ಛಾವಣಿ ಕುಸಿದುಬಿದ್ದಿದ್ದು, ಆಕೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಘಟನೆಯ ವೇಳೆ ಬಾಲಕಿ ಮೂವರು ಸಹೋದರಿಯರು ಇನ್ನೊಂದು ಕೋಣೆಯಲ್ಲಿದ್ದರೆ, ಅಡುಗೆ ಮನೆಯಲ್ಲಿದ್ದ ತಾಯಿ ಯಾವುದೇ ಅಪಾಯಗಳಿಲ್ಲದೇ ಪಾರಾಗಿದ್ದಾರೆ. ಈ ಬಗ್ಗೆ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular