ಬಳ್ಳಾರಿ: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಸಂಚಾರಿ ಇ-ಚಾನೆಲ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
ಸೆಪ್ಟೆಂಬರ್ 12 ರ ವರೆಗೆ ಈ ರಿಯಾಯಿತಿ ಸೌಲಭ್ಯವು ಇರಲಿದ್ದು, ಸೆಪ್ಟೆಂಬರ್ 13 ರಂದು ನಡೆಯಲಿರುವ ರಾಷ್ಟಿçÃಯ ಲೋಕ್ ಅದಾಲತ್ ಪ್ರಯುಕ್ತ ಈ ರಿಯಾಯಿತಿ ನೀಡಲಾಗಿದೆ. ಹಾಗಾಗಿ ಸಾರ್ವಜನಿಕರು ಈ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.