Friday, April 18, 2025
Google search engine

Homeಅಪರಾಧಬೆಂಗಳೂರು ಏರ್ಪೋರ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ೫೨ ಲಕ್ಷ ಮೌಲ್ಯದ ಚಿನ್ನ ಜಪ್ತಿ : ಮೂವರ...

ಬೆಂಗಳೂರು ಏರ್ಪೋರ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ೫೨ ಲಕ್ಷ ಮೌಲ್ಯದ ಚಿನ್ನ ಜಪ್ತಿ : ಮೂವರ ಬಂಧನ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ೫೨ ಲಕ್ಷ ಮೌಲ್ಯದ ೭೩೧ ಗ್ರಾಮ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬ್ಯಾಂಕಾಕ್, ದಮ್ಮಮ್ ಹಾಗೂ ದುಬೈನಿಂದ ಮೂವರು ಚಿನ್ನ ತಂದಿದ್ದರು. ಬಿಸ್ಕೆಟ್ ಮತ್ತು ಆಭರಣಗಳ ಮಾದರಿಯಲ್ಲಿ ತಂದಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಚಿನ್ನದ ಸಮೇತ ಮೂವರನ್ನು ವಶಕ್ಕೆ ಪಡೆದು ಅಧಿಕಾರಿಗಳು ಇದೀಗ ವಿಚಾರಣೆ ನಡೆಸುತ್ತಿದ್ದಾರೆ. ಕೆಎಬಿ ಕಸ್ಟಮ್ಸ್ ಅಧಿಕಾರಿಗಳಿಂದ ಮೂರು ಪ್ರಯಾಣಿಕರ ವಿಚಾರಣೆ ನಡೆಯುತ್ತಿದೆ.

RELATED ARTICLES
- Advertisment -
Google search engine

Most Popular