ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಕಳ್ಳಭಟ್ಟಿ ಸೇವಿಸಿ ೫೫ ಮಂದಿ ದುರಂತ ಸಾವಿಗೀಡಾದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕರುಣಾಪುರಂ ಗ್ರಾಮಕ್ಕೆ ಡಿಸ್ಟಿಲ್ಡ್ ಮದ್ಯವನ್ನು ಪೂರೈಸಿದ ಆರೋಪದ ಮೇಲೆ ಚಿನ್ನದೊರೈ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳ್ಳಭಟ್ಟಿ ಸೇವಿಸಿದ್ದ ಇನ್ನೂ ಅನೇಕರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಗ್ರಾಮದಲ್ಲಿ ನಿತ್ಯ ಒಂದೊಂದು ಸಾವು ವರದಿಯಾಗುತ್ತಿದೆ.