Friday, April 18, 2025
Google search engine

Homeರಾಜ್ಯ೫, ೮ ಮತ್ತು ೯ ನೇ ತರಗತಿಯ ವಿದ್ಯಾರ್ಥಿಗಳು ಪಾಸ್: ಮುಂದಿನ ತರಗತಿಗೆ ಮುಂದುವರೆಸಲು ಅನುಮತಿ

೫, ೮ ಮತ್ತು ೯ ನೇ ತರಗತಿಯ ವಿದ್ಯಾರ್ಥಿಗಳು ಪಾಸ್: ಮುಂದಿನ ತರಗತಿಗೆ ಮುಂದುವರೆಸಲು ಅನುಮತಿ

ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳ ೫, ೮ ಹಾಗೂ ೯ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ತೇರ್ಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ ಕಾವೇರಿ ಆದೇಶ ಹೊರಡಿಸಿದ್ದು, ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಡೆದಿರುವ ಪರೀಕ್ಷೆಗಳ ಮೌಲ್ಯಾಂಕನ ಆಧರಿಸಿ ಮುಂದಿನ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಅನುಕೂಲ ಮಾಡಿಕೊಡುವಂತೆ ಸೂಚಿಸಿದ್ದಾರೆ. ೨೦೨೩-೨೪ನೇ ಸಾಲಿನ ಫಲಿತಾಂಶವನ್ನು ರಾಜ್ಯದ ಎಲ್ಲ ಶಾಲೆಗಳಲ್ಲಿ ಏಪ್ರಿಲ್ ೮ರಂದು ಪ್ರಕಟಿಸುವಂತೆ ಈ ಹಿಂದೆ ಸೂಚಿಸಲಾಗಿತ್ತು. ಆದರೆ, ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ. ಫಲಿತಾಂಶವನ್ನು ಪ್ರಕಟಿಸಲು ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು, ಅಂತಿಮ ತೀರ್ಪು ಬಾಕಿ ಇದೆ.

ಪ್ರಸ್ತುತ ೨೦೨೩-೨೪ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದು, ಮೇ ೨೯ ರಿಂದ ೨೦೨೪- ೨೫ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ೨೦೨೩-೨೪ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ೫, ೮ ಮತ್ತು ೯ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇರುವುದರಿಂದ ೫, ೮ ಹಾಗೂ ೯ನೇ ತರಗತಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ತರಗತಿಗೆ ಪ್ರವೇಶ, ದಾಖಲಾತಿ, ಪ್ರವೇಶ ಶುಲ್ಕ ಪಾವತಿ ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆಗೆ ಪ್ರಮಾಣ ಪತ್ರ, ಪ್ರಗತಿ ಪತ್ರ, ವ್ಯಾಸಂಗ ಪ್ರಮಾಣ ಪತ್ರ ವಿತರಿಸಲು ಶಾಲೆಗಳಿಗೆ ಸಾಧ್ಯವಾಗಿರಲಿಲ್ಲ.

ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಡೆದಿರುವ ಪರೀಕ್ಷೆಗಳ ಮೌಲ್ಯಾಂಕನ ಆಧರಿಸಿ ಮುಂದಿನ ತರಗತಿಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಸೂಚಿಸಿದ್ದಾರೆ. ನ್ಯಾಯಾಲಯದ ಮಧ್ಯಂತರ ತೀರ್ಪಿನಂತೆ, ೨೦೨೩-೨೪ನೇ ಸಾಲಿನ ೫, ೮ ಮತ್ತು ೯ನೇ ತರಗತಿ Sಂ-೨ ಮೌಲ್ಯಾಂಕನವನ್ನು ತಡೆಹಿಡಿದಿರುವ ಹಿನ್ನೆಲೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ ಈಂ- ೧, ಈಂ-೨, ಈಂ-೩, ಈಂ-೪ ೨ Sಂ-೧ ಮೌಲ್ಯಾಂಕನ ಆಧಾರದ ಮೇಲೆ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವುಂತೆ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular