Monday, April 21, 2025
Google search engine

Homeರಾಜ್ಯಸುದ್ದಿಜಾಲಕನ್ನಡ ನಾಮಫಲಕ ಶೇ.೬೦ ರಷ್ಟು ಕಡ್ಡಾಯ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ

ಕನ್ನಡ ನಾಮಫಲಕ ಶೇ.೬೦ ರಷ್ಟು ಕಡ್ಡಾಯ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ

ಮಡಿಕೇರಿ: ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.

ನಾಮಫಲಕಗಳಲ್ಲಿ ಶೇ.೬೦ರಷ್ಟು ಕನ್ನಡ ಕಡ್ಡಾಯ ಸಂಬಂಧ ಇತ್ತೀಚೆಗೆ ಹೊರಡಿಸಿರುವ ಸರ್ಕಾರದ ಅಧಿಸೂಚನೆ ಹಿನ್ನೆಲೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ, ವಿದೇಯಕ, ೨೦೨೪ ಈ ಸಂಬಂಧ ಫೆಬ್ರವರಿ, ೨೫ ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು.

ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲಾ ಸಂಸ್ಥೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ಖಾಸಗಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡಭಾಷೆಯನ್ನು ಶೇ.೬೦ ರಷ್ಟು ಪ್ರದರ್ಶಿಸಬೇಕು/ಬರೆಸಿರಬೇಕು ಎಂದು ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಗಡಿ ಪ್ರದೇಶಗಳು, ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ಈ ಕಾರ್ಯ ಆಗದಿದ್ದಲ್ಲಿ ಪ್ರಥಮ ಹಂತದಲ್ಲಿ ೫ ಸಾವಿರ, ಎರಡನೇ ಹಂತದಲ್ಲಿ ೧೦ ಸಾವಿರ ದಂಡ ಪಾವತಿಸಬೇಕಾಗುತ್ತದೆ. ನಂತರ ಪರವಾನಿಗೆಯನ್ನು ರದ್ದು ಪಡಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

RELATED ARTICLES
- Advertisment -
Google search engine

Most Popular