Monday, April 21, 2025
Google search engine

Homeರಾಜ್ಯಸುದ್ದಿಜಾಲರೈತರ ಪಂಪ್‍ಸೆಟ್‍ಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆಗೆ ಬದ್ದ: ಮಹಂತೇಶ್ ಬೀಳಗಿ

ರೈತರ ಪಂಪ್‍ಸೆಟ್‍ಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆಗೆ ಬದ್ದ: ಮಹಂತೇಶ್ ಬೀಳಗಿ

ದಾವಣಗೆರೆ: ಸರ್ಕಾರದ ಸೂಚನೆಯಂತೆ ಬೆಸ್ಕಾಂ ರೈತರ ಪಂಪ್‍ಸೆಟ್‍ಗಳಿಗೆ ನಿರಂತರ ವಿದ್ಯುತ್ ಪೂರೈಕೆಗೆ ಬದ್ದವಾಗಿದ್ದು ಮಳೆಯ ಕೊರತೆಯ ನಡುವೆ ಬೇಸಿಗೆ ನಿರ್ವಹಣೆಗಾಗಿ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಬೆಸ್ಕಾಂ ಎಂ.ಡಿ. ಮಹಂತೇಶ್ ಬೀಳಗಿ ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜನಪ್ರತಿನಿಧಿಗಳೊಂದಿಗೆ ದಾವಣಗೆರೆ ಜಿಲ್ಲಾ ಬೆಸ್ಕಾಂ ಕುಂದು ಕೊರತೆಯ ಸಭೆಯಲ್ಲಿ ಮಾತನಾಡಿದರು. ಈ ವರ್ಷ ಮುಂಗಾರು ಮಳೆಯ ಕೊರತೆಯಿಂದ ಜಲಾಶಯಗಳಲ್ಲಿ ನೀರು ಸಂಗ್ರಹ ಕಡಿಮೆಯಾಗಿದ್ದು ರೈತರು ಪಂಪ್‍ಸೆಟ್‍ಗಳ ಮೇಲೆಯೇ ಜೂನ್ ತಿಂಗಳಿನಿಂದಲೂ ಅವಲಂಭಿತವಾಗಿದ್ದರಿಂದ ತೀವ್ರ ವಿದ್ಯುತ್ ಕೊರತೆಯನ್ನು ಎದುರಿಸಬೇಕಾಗಿದೆ.

ಕೊರತೆಯನ್ನು ನೀಗಿಸಲು ಈಗಾಗಲೇ ಜಿಂದಾಲ್, ಸಕ್ಕರೆ ಕಾರ್ಖಾನೆಗಳು, ಯು.ಪಿ.ಸಿ.ಎಲ್, ಸೋಲಾರ್, ವಿಂಡ್‍ಮಿಲ್ ಮೂಲಕ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಈಗ ಯಾವುದೇ ವಿದ್ಯುತ್ ಕೊರತೆಯಾಗದಂತೆ ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆ ಆರಂಭವಾಗುತ್ತಿದ್ದು ಈ ದಿನಗಳಲ್ಲಿ ಇನ್ನಷ್ಟು ವಿದ್ಯುತ್ ಅಭಾವವಾಗಬಹುದೆಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್ ಕರೆಯಲಾಗಿದ್ದು ಬೇಸಿಗೆಯಲ್ಲಿ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಈ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ಎಂ.ಡಿ. ತಿಳಿಸಿದರು.

ಕೆ.ಪಿ.ಟಿ.ಸಿ.ಎಲ್ ಗುಲ್ಬರ್ಗಕ್ಕೆ ಬರುತ್ತದೆ. ಇದನ್ನ ಸರಿಪಡಿಸಲು ಲತಾ ಮಲ್ಲಿಕಾರ್ಜುನ್ ಮನವಿ ಮಾಡಿದರು. ಹೊಸ ಬಡಾವಣೆಗಳ ಸಮೀಕ್ಷೆ; ಗ್ರಾಮಾಂತರ ಪ್ರದೇಶದಲ್ಲಿ ಹೊಸದಾಗಿ ಅಲ್ಲಲ್ಲಿ ಗುಚ್ಚ ಮನೆ ಮತ್ತು ರಸ್ತೆ ಬದಿಯಲ್ಲಿ ತಮ್ಮ ಜಮೀನುಗಳಲ್ಲಿ ಮನೆ ನಿರ್ಮಾಣ ಮಾಡಿಕೊಂಡಿದ್ದು ಇಂತಹ ಜನವಸತಿ ಪ್ರದೇಶಕ್ಕೆ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಕಲ್ಪಿಸಲು ಸಮೀಕ್ಷೆ ಮಾಡಿ ಅಂದಾಜು ಪಟ್ಟಿ ನೀಡಲು ಬೆಸ್ಕಾಂ ಇಂಜಿನಿಯರ್‍ಗಳಿಗೆ ತಿಳಿಸಿದರು.

ಸಭೆಯಲ್ಲಿ ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್, ಮುಖ್ಯ ಇಂಜಿನಿಯರ್ ಗೋವಿಂದಪ್ಪ, ಕೆ.ಪಿ.ಟಿ.ಸಿ.ಎಲ್. ಮುಖ್ಯ ಇಂಜಿನಿಯರ್ ಉಮೇಶ್, ಅಧೀಕ್ಷಕ ಇಂಜಿನಿಯರ್ ಜಗದೀಶ್ ಹಾಗೂ ಬೆಸ್ಕಾಂ ಇಂಜಿನಿಯರ್‍ಗಳು ಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular