ಚಾಮರಾಜನಗರ: ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಕಛೇರಿಯ ಆವರಣದಲ್ಲಿ ಆಯೋಜಿಸಲಾಗಿದ್ದ 75 ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಪಿ. ಮರಿಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಿ, ಸಂವಿಧಾನದ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹಾಗೂ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಬಿ.ಕೆ.ರವಿಕುಮಾರ್ ರವರು,ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್ ರವರು, ಆರ್.ಮಹದೇವ್ ರವರು, ಕೆಪಿಸಿಸಿ ಸದಸ್ಯರಾದ ಸೈಯದ್ ರಫಿ ರವರು, ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಮಹಮ್ಮದ್ ಅಜ್ಗರ್, ಚೂಡ ಮಾಜಿ ಅಧ್ಯಕ್ಷರಾದ ಸುಹೇಲ್ ಆಲಿ ಖಾನ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಂದ್ರ, ಮುಖಂಡರಾದ ಡಿ.ಎನ್. ನಟರಾಜ್, ಕಾಗಲವಾಡಿ ಚಂದ್ರು, ದೊಡ್ಡರಾಯಪೇಟೆ ಮೂರ್ತಿ ರವರು, ರವಿ ಗೌಡ ರವರು, ಶಿವಮೂರ್ತಿ ರವರು, ಮಸಗಪುರ ರಾಜು ರವ, ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾದ ನಾಗೇಂದ್ರ ನಾಯಕ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್, ವಿದ್ಯಾರ್ಥಿ ಕಾಂಗ್ರೆಸ್ ನ ಅಧ್ಯಕ್ಷರಾದ ಮೋಹನ್ ಕುಮಾರ್, ಕಾರ್ಮಿಕ ಘಟಕದ ಅಧ್ಯಕ್ಷರಾದ ಮಹೇಶ್, ಶ್ರೀನಿವಾಸ್, ಅಕ್ಷಯ್ ಹಾಗೂ ಇತರರು ಉಪಸ್ಥಿತರಿದ್ದರು.