ಮೈಸೂರು : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ೭೬ ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜನವರಿ ೨೬ ರಂದು ಬೆಳಗ್ಗೆ ೯ ಗಂಟೆಗೆ ಪಂಜಿನ ಕವಾಯಿತು ಮೈದಾನ, ಬನ್ನಿಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರು ಧ್ವಜಾರೋಹಣ ಮಾಡಲಿದ್ದಾರೆ. ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವಿರ್ ಸೇಠ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್ ಅವರು ಆಗಮಿಸಲಿದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ.ಹರೀಶ್ ಗೌಡ ಹಾಗೂ ವಿಧಾನ ಪರಿಷತ್ನ ಸದಸ್ಯರುಗಳಾದ ಹೆಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ಯತಿಂದ್ರ.ಎಸ್ ಮತ್ತು ವಿವೇಕಾನಂದ.ಎಸ್, ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಹಾಗೂ ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.