Monday, April 14, 2025
Google search engine

Homeದೇಶಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಗೆ ೭೭ ಮಂದಿ ಸಾವು

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಗೆ ೭೭ ಮಂದಿ ಸಾವು

ಶಿಮ್ಲಾ: ಭಾರಿ ಮಳೆಯಿಂದ ಆಗಿರುವ ಹಾನಿಯನ್ನು ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯ ನೈಸರ್ಗಿಕ ವಿಕೋಪ ಎಂದು ಘೋಷಿಸಿದೆ. ಮಳೆಪೀಡಿತ ಹಿಮಾಚಲ ಪ್ರದೇಶದಲ್ಲಿ ಒಟ್ಟು ೭೭ ಮಂದಿ ಮೃತಪಟ್ಟಿರುವ ಘಟನೆ ನೆಡೆದಿದೆ. ಗುಡ್ಡಗಾಡು ಪ್ರದೇಶದಲ್ಲಿರುವ ಶಿವ ದೇವಾಲಯದ ಅವಶೇಷಗಳಡಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಭಾರಿ ಮಳೆಯಿಂದ ಮೃತಪಟ್ಟವರ ಸಂಖ್ಯೆ ೭೭ಕ್ಕೆ ಏರಿಕೆಯಾಗಿದೆ.

ಶಿವ ದೇವಾಲಯದ ಅವಶೇಷಗಳಡಿ ಇನ್ನೂ ನಾಲ್ಕು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ ತಿಳಿಸಿದ್ದಾರೆ. ರಾಜ್ಯದಲ್ಲಿ ಭಾರಿ ಮಳೆಯಿಂದ ಜೀವ ಹಾನಿಯನ್ನು ಗಣನೆಗೆ ತೆಗೆದುಕೊಂಡು ಸಂಪೂರ್ಣ ಗುಡ್ಡಗಾಡು ರಾಜ್ಯವನ್ನು ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ರಾಜ್ಯ ಎಂದು ಘೋಷಿಸಲಾಗಿದೆ. ಗುಡ್ಡುಗಾಡು ರಾಜ್ಯದಲ್ಲಿ ಭಾರಿ ಮಳೆಯಾಗಿದ್ದು, ಶಿಮ್ಲಾ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭೂಕುಸಿತಕ್ಕೆ ಕಾರಣವಾಗಿದೆ.

ರಕ್ಷಣಾ ಕಾರ್ಯಾಚರಣೆಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡಲು ರಾಜ್ಯ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ವಿಶೇಷವಾಗಿ ಪ್ರವಾಹದಿಂದ ಮನೆ ಹಾನಿಗೀಡಾಗಿರುವವರು ಹಾಗೂ ಭೂಕುಸಿತಕ್ಕೆ ಸಿಲುಕಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರವು ತನ್ನದೇ ಸಂಪನ್ಮೂಲಗಳ ಮೂಲಕ ನೆರವು ನೀಡಲಿದೆ ಎಂದು ಮುಖ್ಯಮಮತ್ರಿ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ

RELATED ARTICLES
- Advertisment -
Google search engine

Most Popular