ಗದಗ: 77 ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಗದಗ ನಗರದ ಕೆಎಚ್ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲರು ಧ್ವಜಾರೋಹಣ ನೆರವೇರಿಸಿ, ಪೊಲೀಸ್ ಗೌರವ ವಂದನೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್, ಅಬಕಾರಿ, ಎನ್ ಸಿಸಿ, ಅಗ್ನಿ ಶಾಮಕ ದಳ ಸೇರಿದಂತೆ ವಿವಿಧ ತಂಡದಿಂದ ಆಕರ್ಷಕ ಪಥಸಂಚಲನ ನಡೆಯಿತು.
ಕಾರ್ಯಕ್ರಮದಲ್ಲಿ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಡಿಸಿ ವೈಶಾಲಿ ಎಂ ಎಲ್, ಎಸ್ ಪಿ ಬಿ ಎಸ್ ನೇಮಗೌಡ, ಎಡಿಸಿ ಅನ್ನಪೂರ್ಣ ಸೇರಿದಂತೆ ವಿವಿಧ ಗಣ್ಯರು ಭಾಗಿಯಾಗಿದ್ದರು.