Tuesday, April 15, 2025
Google search engine

HomeUncategorizedರಾಷ್ಟ್ರೀಯ77ನೇ ಸ್ವಾತಂತ್ರ್ಯ ದಿನಾಚರಣೆ: ಕಾಶ್ಮೀರದಾದ್ಯಂತ ಬಿಗಿ ಭದ್ರತೆ

77ನೇ ಸ್ವಾತಂತ್ರ್ಯ ದಿನಾಚರಣೆ: ಕಾಶ್ಮೀರದಾದ್ಯಂತ ಬಿಗಿ ಭದ್ರತೆ

ಶ್ರೀನಗರ: 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಶ್ಮೀರದಾದ್ಯಂತ ಭದ್ರತೆ ಬಿಗಿ ಮಾಡಲಾಗಿದೆ. ಧ್ವಜಾರೋಹಣ ನಡೆಯುವ ಸ್ಥಳದಲ್ಲಿ ಬಹು ಹಂತದ ಭದ್ರತೆ ಕೈಗೊಳ್ಳಲಾಗಿದೆ.

ಆ.15ರಂದು ಧ್ವಜಾರೋಹಣ ನಡೆಯುವ ಬಕ್ಷಿ ಕ್ರೀಡಾಂಗಣದಲ್ಲಿ ಇಂದು ಪೂರ್ವ ತಾಲೀಮು ನಡೆದಿದ್ದು, ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿ.ಕೆ. ಬಿರ್ಡಿ ಅವರು ಕವಾಯತಿನಲ್ಲಿ ಗೌರವ ವಂದನೆ ಸ್ವೀಕರಿಸಿದರು.

ಪರೇಡ್‌ನಲ್ಲಿ ಭದ್ರತಾ ಸಿಬ್ಬಂದಿ, ಶಾಲಾ ಮಕ್ಕಳು, ಪೊಲೀಸ್‌ ಅಧಿಕಾರಿಗಳು ಭಾಗಿಯಾದರು.

ಸ್ವಾತಂತ್ರ್ಯ ದಿನಾಚರಣೆ ಶಾಂತಿಯುತವಾಗಿ ನಡೆಯಲು ಅಗತ್ಯವಾದ ಭದ್ರತೆಯನ್ನು ಕೈಗೊಳ್ಳಲಾಗಿದೆ. ಧ್ವಜಾರೋಹಣ ನಡೆಯುವ ಬಕ್ಷಿ ಕ್ರೀಡಾಂಗಣದ ಸುತ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಯಾವುದೆ ವಿಶೇಷ ಒಪ್ಪಿಗೆಯ ಅಗತ್ಯವಿಲ್ಲ. ಎಲ್ಲರೂ ಮುಕ್ತವಾಗಿ ಪಾಲ್ಗೊಳ್ಳಬಹುದು. ಪರೇಡ್‌ ಬಳಿಕ ಕಲಾವಿದರು, ಜಮ್ಮು ಮತ್ತು ಕಾಶ್ಮೀರದ ಶಾಲೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಕಾಶ್ಮೀರದ ವಿಭಾಗೀಯ ಆಯುಕ್ತ ವಿ.ಕೆ ಬಿದೂರಿ ಪಿಟಿಐಗೆ ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular