ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಕೆ.ಆರ್.ನಗರ ತಾಲೂಕಿನ ದೆಗ್ಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ ವಿವಿಧ ಕ್ರೀಡೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೂ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ದೆಗ್ಗನಹಳ್ಳಿ ಆನಂದ್ ರವರು ಮಾತನಾಡಿ. ಹಿರಿಯರ ತ್ಯಾಗ ಬಲಿದಾನದ ಪ್ರತಿಫಲವೆ ಸ್ವಾತಂತ್ರ್ಯ ಮೂಲಭೂತ ಹಕ್ಕುಗಳನ್ನು ಪ್ರತಿಪಾದಿಸುವ ನಾವು ಮೂಲಭೂತ ಕರ್ತವ್ಯಗಳನ್ನು ಪಾಲಿಸುವುದರ ಮೂಲಕ ದೇಶದ ಪ್ರಗತಿ ಹಾಗೂ ಅಭಿವೃದ್ಧಿಗೆ ನೆರವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶಿವಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಡಿ.ಜೆ ಮಹದೇವ್, ಶಿವಣ್ಣ, ಶೋಭಾ ರಾಮಕೃಷ್ಣ, ಮುಖಂಡರಾದ ವರದರಾಜು, ರಮೇಶ್, ಕಾಶಿ ಮಂಜು, ವೆಂಕಟರಾಮು, ಸುರೇಶ್, ಮುಖ್ಯೋಪಾಧ್ಯಾಯರಾದ ದೇವ್ ಕುಮಾರ್ ರವರು ಶಿಕ್ಷಕರಾದ ಶಿವಣ್ಣ, ಶಾರದಮ್ಮ ಕವಿತ, ಮುಂತಾದವರು ಉಪಸ್ಥಿತರಿದ್ದರು.