ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಇದೇ 30ರಂದು ಏಳನೇ ವರ್ಷದ ಮಂಗಳೂರು ಕಂಬಳ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಬೃಜೇಶ್ ಚೌಟ ತಿಳಿಸಿದರು.
ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ‘30ರಂದು ಬೆಳಿಗ್ಗೆ 8.30 ಕಂಬಳವನ್ನು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಉದ್ಘಾಟಿಸುವರು. ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ತುಕಾರಾಮ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿದ ಅಧ್ಯಕ್ಷ ಕೆ.ಚಿತ್ತರಂಜನ್, ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದ, ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಭಾಗವಹಿಸುವರು’ ಎಂದರು.