ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 8.93 ಕೋಟಿ ಅಂದಾಜು ಮೌಲ್ಯದ ಒಟ್ಟು 2 ಎಕರೆ 0.06 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.
ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ
ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಖರಾಬು, ಸ್ಮಶಾನ, ಸರ್ಕಾರಿ
ಓಣೆ ಮತ್ತು ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.*ಆನೇಕಲ್
ತಾಲ್ಲೂಕಿನ* ಅತ್ತಿಬೆಲೆ ಹೋಬಳಿಯ ಭಕ್ತಿಪುರ ಗ್ರಾಮದ ಸ.ನಂ. 38 ರ ಗೋಮಾಳ ಒಟ್ಟು
ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.35
ಲಕ್ಷಗಳಾಗಿರುತ್ತದೆ.
*ಬೆಂಗಳೂರು ದಕ್ಷಿಣ ತಾಲ್ಲೂಕಿನ* ತಾವರೆಕೆರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸ.ನಂ 141 ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.11 ಗುಂಟೆಗಳಾಗಿದ್ದು, ಅಂದಾಜು
ಮೌಲ್ಯ ರೂ 0.65 ಲಕ್ಷಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ಕಂಬೀಪುರ ಗ್ರಾಮದ ಸ.ನಂ 173 ರ
ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.27 ಗುಂಟೆಗಳಾಗಿದ್ದು,
ಅಂದಾಜು ಮೌಲ್ಯ ರೂ 3.50 ಕೋಟಿಗಳಾಗಿರುತ್ತದೆ
*ಬೆಂಗಳೂರು ಉತ್ತರ ತಾಲ್ಲೂಕಿನ* ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ
2.50 ಕೋಟಿಗಳಾಗಿರುತ್ತದೆ.
*ಯಲಹಂಕ ತಾಲ್ಲೂಕಿನ* ಯಲಹಂಕ ಹೋಬಳಿಯ ಶಿವನಹಳ್ಳಿ ಗ್ರಾಮದ ಸ.ನಂ 48 ರ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.03 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.13 ಕೋಟಿಗಳಾಗಿರುತ್ತದೆ. ಜಾಲ ಹೋಬಳಿಯ ಗಡೇನಹಳ್ಳಿ ಗ್ರಾಮದ ಸ.ನಂ 22 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.19 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ
0.80 ಲಕ್ಷಗಳಾಗಿರುತ್ತದೆ.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯಾದ ಜಗದೀಶ್ ಕೆ ನಾಯಕ್, ಜಿಲ್ಲಾಧಿಕಾರಿಗಳ ಕಚೇರಿಯ
ಕಚೇರಿ ಸಹಾಯಕರು ಹಾಗೂ ವಿವಿ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.