Sunday, May 24, 2026
Google search engine

Homeಅಪರಾಧಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದ 8 ಮಂದಿ ನದಿಯಲ್ಲಿ ದುರ್ಮರಣ

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದ 8 ಮಂದಿ ನದಿಯಲ್ಲಿ ದುರ್ಮರಣ

ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋದ 8 ಮಂದಿ ಜಲ ಸಮಾಧಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ನಡೆದಿದೆ. ಹಲವರ ಸ್ಥಿತಿ ಗಂಭೀರವಾಗಿದೆ.

ಲಕ್ಷ್ಮಿ ಮಾದೇವ ನಾಯ್ಕ (38), ಲಕ್ಷ್ಮಿ ಮಹಾದೇವ ನಾಯ್ಕ, ಲಕ್ಷ್ಮಿ ಶಿವರಾಂ ನಾಯ್ಕ (39), ಉಮೇಶ್ ಮಂಜುನಾಥ್ ನಾಯ್ಕ (42), ಮಾಸ್ತಮ್ಮ ಮಂಜುನಾಥ್ (43), ಲಕ್ಷ್ಮಿ ಅಣ್ಣಪ್ಪನಾಯ್ಕ (44), ಜ್ಯೋತಿ ನಾಗಪ್ಪ ನಾಯ್ಕ (37), ಮಾಲತಿ ಜಟ್ಟಪ್ಪ ನಾಯ (38) ಮೃತ ದುರ್ದೈವಿಗಳು. ಎಲ್ಲರೂ ಭಟ್ಕಳದ ಪಡುಶಿರಾಲಿ ಮೂಲದವರು. ಹಾಗೂ ಒಂದೇ ಕುಟುಂಬದವರು ಎಂಬ ಮಾಹಿತಿ ಲಭ್ಯವಾಗಿದೆ.

ಒಟ್ಟು 13 ಮಂದಿ ಕಪ್ಪೆಚಿಪ್ಪು ತೆಗೆಲು ಹೋಗಿದ್ದರು. ಈ ಪೈಕಿ 8 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಅಸ್ವಸ್ಥರಾಗಿದ್ದು, ಅವರನ್ನ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಮೂವರಿಗಾಗಿ ಇನ್ನುಳಿದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನದಿ ಪ್ರದೇಶದಲ್ಲಿ ಅಪಾರ ಜನರು ಸೇರಿದ್ದು, ಉಳಿದವರಾದ್ರೂ ಬದುಕಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಇನ್ನೂ ಮೃತಪಟ್ಟ 8 ಮಂದಿಯ ಮೃತದೇಹಗಳನ್ನ ಭಟ್ಕಳ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸುನೀಲ್ ನಾಯ್ಕ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕೃಷ್ಣಮೂರ್ತಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

RELATED ARTICLES
- Advertisment -
Google search engine

Most Popular