ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ೯೨೯ ಕಿ.ಮೀ. ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ೮,೦೦೬ ಕೋಟಿ ಮಂಜೂರು ಮಾಡಲು ಅನುಮೋದನೆ ನೀಡಿದೆ.
ರಾಜ್ಯದ ಹೆದ್ದಾರಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗವು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕಳೆದ ವಾರ ಮನವಿ ಸಲ್ಲಿಸಿತ್ತು.
೨೦೨೪-೨೫ನೇ ಸಾಲಿನ ವಾರ್ಷಿಕ ಯೋಜನೆಯಡಿ ಈ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಸಿರಾ-ಬೈರೇನಹಳ್ಳಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.