Saturday, April 19, 2025
Google search engine

Homeರಾಜ್ಯಸುದ್ದಿಜಾಲ2023-24 ಸಾಲಿನ SSLC ಪರೀಕ್ಷೆಗೆ 8,69,968 ವಿದ್ಯಾರ್ಥಿಗಳು ನೋಂದಣಿ

2023-24 ಸಾಲಿನ SSLC ಪರೀಕ್ಷೆಗೆ 8,69,968 ವಿದ್ಯಾರ್ಥಿಗಳು ನೋಂದಣಿ

ಬೆಂಗಳೂರು: ಮಾರ್ಚ್​​ 25ರಿಂದ ಏಪ್ರಿಲ್​​ 6ರ ವರೆಗೆ ನಡೆಯಲಿರುವ 2023-24 ಸಾಲಿನ ಎಸ್​​ಎಸ್​​ಎಲ್​ಸಿ ಪರೀಕ್ಷೆ- 1ಕ್ಕೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಅದರಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯುತ್ತಿದ್ದಾರೆ. ಒಟ್ಟು 2750 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡುವುದು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲು ಸಜ್ಜು ಮಾಡಿಕೊಳ್ಳಲಾಗಿದೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಸಿಸಿಟಿವಿ ಕ್ಯಾಮರಾ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾವಹಿಸಲಾಗುತ್ತಿದೆ. ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಡಯಟ್ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಡಯಟ್​ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರಗಳಿಗೆ ವಿಚಕ್ಷಣ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳು ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಉರ್ದು ಮತ್ತು ಮರಾಠಿ ಸೇರಿ ಒಟ್ಟು ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪರೀಕ್ಷಾ ವೇಳಾಪಟ್ಟಿ

25-03-2024: ಪ್ರಥಮ ಭಾಷೆ ಪರೀಕ್ಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ + ಇಂಗ್ಲಿಷ್ NCERT, ಸಂಸ್ಕೃತ)

27-03-2024: ಸಮಾಜ ವಿಜ್ಞಾನ (ಕೋರ್‌ ಸಬ್ಜೆಕ್ಟ್‌)

30-03-2024: ವಿಜ್ಞಾನ, ರಾಜ್ಯಶಾಸ್ತ್ರ

02-04-2024: ಗಣಿತ, ಸಮಾಜ ಶಾಸ್ತ್ರ

03-04-2024: ಅರ್ಥಶಾಸ್ತ್ರ

04-04-2024: ತೃತೀಯ ಭಾಷೆ ಪರೀಕ್ಷೆ (ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು).

6-04-2024- ದ್ವೀತಿಯ ಭಾಷೆ( ಇಂಗ್ಲೀಷ್, ಕನ್ನಡ).

RELATED ARTICLES
- Advertisment -
Google search engine

Most Popular