Friday, April 11, 2025
Google search engine

Homeಕಲೆ-ಸಾಹಿತ್ಯ87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ ಸಕ್ಕರೆ ನಾಡು ಮಂಡ್ಯದಲ್ಲಿ ಆರಂಭಗೊಂಡಿದೆ. ಸಮ್ಮೇಳನದ ಸರ್ವಾಧ್ಯಕ್ಷ, ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಅವರ ನೇತೃತ್ವದಲ್ಲಿ ಇಂದಿನಿಂದ 3 ದಿನಗಳ ಕಾಲ ನಡೆಯಲಿರುವ ನುಡಿ ಜಾತ್ರೆಗೆ ಚಾಲನೆ ಸಿಕ್ಕಿದ್ದು, ಸಮ್ಮೇಳನಾಧ್ಯಕ್ಷರ ಅದ್ದೂರಿ ಮೆರವಣಿಗೆ ಆರಂಭವಾಗಿದೆ.

ಗೊ.ರು. ಚನ್ನಬಸಪ್ಪ ಅವರು ‘ಅರಮನೆ ದರ್ಬಾರ್ ಸಿಂಹಾಸನ’ವನ್ನು ಒಳಗೊಂಡ ವಿಶೇಷ ರಥವನ್ನು ಏರಿದ್ದಾರೆ. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮೊದಲು ರಥವನ್ನು ಏರಿ ಚನ್ನಬಸಪ್ಪರನ್ನು ಕೈ ನೀಡಿ ಬರಮಾಡಿಕೊಂಡರು.

ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಮೈಸೂರು ಅರಮನೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಬೇಕಿತ್ತು. ಅವರು ಗೈರು ಹಾಜರಾದ ಕಾರಣ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು. ಬೆಳಿಗ್ಗೆ ಏಳು ಗಂಟೆಗೆ ಆರಂಭವಾಗಬೇಕಿದ್ದ ಮೆರವಣಿಗೆ ಒಂದೂವರೆ ಗಂಟೆ ತಡವಾಗಿ ಅಂದರೆ ಬೆಳಗ್ಗೆ 8:25ಕ್ಕೆ ಆರಂಭಗೊಂಡಿತು.

ಪುರುಷೋತ್ತಮಾನಂದನಾಥ ಸ್ವಾಮೀಜಿ, ಕಸಾಪ ಅಧ್ಯಕ್ಷ ಮಹೇಶ ಜೋಶಿ, ಸಚಿವ ಚಲುವರಾಯಸ್ವಾಮಿ, ಶಾಸಕರಾದ ಪಿ.ರವಿಕುಮಾರ್, ಪಿ.ಎಂ.ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ಮೀರಾ ಶಿವಲಿಂಗಯ್ಯ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಮೆರವಣಿಗೆಗೆ ಮೆರುಗು ನೀಡಿದ ಕಲಾತಂಡಗಳು

ನಂದಿಧ್ವಜ, ಚಕ್ಕಡಿಗಾಡಿ, ಕೊಂಬುಕಹಳೆ, ನಾದಸ್ವರ, ಸ್ತಬ್ಧಚಿತ್ರ, ವೀರಗಾಸೆ, ತಮಟೆ, ಕಂಸಾಳೆ, ಮಹಿಳಾ ವೀರಗಾಸೆ, ಕೀಲುಕುದುರೆ, ಜಗ್ಗಲಿಗೆ ಮೇಳ, ಪೂರ್ಣಕುಂಭ, ನಗಾರಿ, ಛತ್ರಿಚಾಮರ, ಲಿಡಕರ್ ಸ್ತಬ್ಧಚಿತ್ರ, ಖಾಸಬೇಡರಪಡೆ, ಭಾಗವಂತಿಕೆ, ಹಗಲು ವೇಷ, ಅರೆವಾದ್ಯ, ಪೆಟ್ಟಿಗೆ ಮಾರಮ್ಮ, ಕೋಲಾಟ, ಗಾರುಡಿಗೊಂಬೆ, ಕರಗ, ಚಿಲಿಪಿಲಿ ಗೊಂಬೆ, ದಾಸಪ್ಪ ಜೋಗಪ್ಪ, ಬೆಂಕಿಭರಾಟೆ, ದೊಣ್ಣೆ ವರಸೆ, ಚಿಟ್ಟಲಗಿ ಮೇಳ, ಷಹನಾಯವಾದನ, ಗಾರುಡಿ ಗೊಂಬೆ, ಯಕ್ಷಗಾನ ಗೊಂಬೆ, ವಾನರಸೇನೆ, ಕರಡಿ ಮಜಲು, ದೇವಿ ವೇಷಧಾರಿ, ಕೀಲು ಕುದುರೆ, ನೃತ್ಯ, ಮರಗಾಲು, ಮುಳ್ಳು ಕುಣಿತ, ಡೊಳ್ಳು ಕುಣಿತ, ಪೂಜಾಕುಣಿತ, ಡೊಳ್ಳು ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಪಟಕುಣಿತ, ರಂಗದಕುಣಿತ, ಮಹಿಳಾ ಡೊಳ್ಳು ಕುಣಿತ, ಸೋಮನ ಕುಣಿತ, ಗೊರವರ ಕುಣಿತ, ಲಂಬಾಣಿ ನೃತ್ಯ, ಕೋಳಿ ನೃತ್ಯ, ಕೊಡವ ನೃತ್ಯ, ಜೋಗತಿ ನೃತ್ಯ, ವೀರಮಕ್ಕಳ ಕುಣಿತ, ಸತ್ತಿಗೆ ಕುಣಿತ, ದಟ್ಟಿ ಕುಣಿತ, ಹಲಗು ಕುಣಿತ, ಪಟಕುಣಿತ, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ, ವಿಶ್ವೇಶ್ವರಯ್ಯ ವೇಷಧಾರಿ, ಅಶ್ವಾರೋಹಿ ದಳ, ಟಾಂಗಾ ಗಾಡಿ, ಎತ್ತಿನ ಗಾಡಿ, ಸಮ್ಮೇಳನಾಧ್ಯಕ್ಷರ ಭಾವಚಿತ್ರ ಒಳಗೊಂಡ 87 ಆಟೋ ರಿಕ್ಷಾಗಳು, ಸ್ಕೌಟ್ಸ್ ಮತ್ತು ಗೈಟ್ಸ್, ಎನ್ ಸಿಸಿ, ಭಾರತ್ ಸೇವಾದಳ ತಂಡ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.

ಹೊರರಾಜ್ಯದ ಕಲಾ ಪ್ರಕಾರಗಳು

ತಮಿಳುನಾಡಿನ ಕರಗಂ, ಒಡಿಶಾದ ಸಂಬಲ್ಪುರಿ ಮತ್ತು ಧಾಪ್ ಬುಡಕಟ್ಟು ನೃತ್ಯ, ಮಧ್ಯಪ್ರದೇಶದ ಬಧಾಯಿ ಮತ್ತು ನೋರಾ, ಕಲಾ ಪ್ರಕಾರಗಳು ಒಳಗೊಂಡಂತೆ, ನಾನಾ ಜಿಲ್ಲೆಯ ನೂರಾರು ಕಲಾತಂಡಗಳು ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಸಾಗಿದವು.

ವಿವಿಧ ಜಿಲ್ಲೆ ಮತ್ತು ಹೊರರಾಜ್ಯಗಳ 157 ಕಲಾತಂಡಗಳು 2,250 ಕಲಾವಿದರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.

RELATED ARTICLES
- Advertisment -
Google search engine

Most Popular