Friday, April 4, 2025
Google search engine

Homeರಾಜ್ಯಸುದ್ದಿಜಾಲ87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ವಿತರಣೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ವಿತರಣೆ

ಚಾಮರಾಜನಗರ: ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಚಾಮರಾಜನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ವಿತರಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಸುರೇಶ್ ಋಗ್ವೇದಿ ಮಾತನಾಡಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಮೂರು ದಿನಗಳ ಕಾಲ ಡಿಸೆಂಬರ್ 20 ,21 ,22 ರಂದು ಅಭೂತಪೂರ್ವವಾಗಿ ನಡೆಯುತ್ತಿದ್ದು ನಾಡಿನ ಜಲ ,ಭಾಷೆ,ಸಂಸ್ಕೃತಿ, ಪರಂಪರೆ ಸಂಗೀತ ,ನೃತ್ಯ ಹಾಗೂ ವಿವಿಧ ಪ್ರಕಾರಗಳ ಚಿಂತನ ಮಂಥನ ಕಾರ್ಯಕ್ರಮ ನಡೆಯಲಿದೆ .

ನಾಡಿನ ಹೆಸರಾಂತ ವಿದ್ವಾಂಸರಾದ ಗೊ ರು ಚೆನ್ನಬಸಪ್ಪನವರು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಮಸ್ತ ಕನ್ನಡಿಗರು ಆಗಮಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ತಿಳಿಸುತ್ತಾ , ಗಡಿ ಜಿಲ್ಲೆ ಚಾಮರಾಜನಗರಕ್ಕೆ ಮುಂದಿನ ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷರಾದ ಮಹೇಶ್ ಜೋಶಿ ಅವರು ವಿಶೇಷವಾಗಿ ಆಸಕ್ತಿ ವಹಿಸಬೇಕೆಂದು ಹಾಗೂ ಚಾಮರಾಜನಗರ ಜಿಲ್ಲೆಗೆ ಆತಿಥ್ಯ ವಹಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ಸದಸ್ಯರಾದ ಶಿವನಂಜಪ್ಪ, ಮೂರ್ತಿಬಿಸಲವಾಡಿ, ಉಪನ್ಯಾಸಕರಾದ ಬೊಮ್ಮಲಾಪುರ ಬಸವಣ್ಣ, ರಮೇಶ್ ದೊಡ್ಡಮೋಳೆ ಸುರೇಶ್ ಇದ್ದರು.

RELATED ARTICLES
- Advertisment -
Google search engine

Most Popular