ಪಾಟ್ನಾ: ಕಳೆದ ೨೪ ಗಂಟೆಗಳಲ್ಲಿ ಬಿಹಾರದ ಆರು ಜಿಲ್ಲೆಗಳಲ್ಲಿ ಇಂದು ಶನಿವಾರ ಸಿಡಿಲು ಬಡಿದು ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೆಹಾನಾಬಾದ್, ಮಾಧೇಪುರ, ಪೂರ್ವ ಚಂಪಾರಣ್, ರೋಹ್ಟಾಸ್, ಸರನ್ ಮತ್ತು ಸುಪಾಲ್ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಸಾವುಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಡಿಲು ಬಡಿದು ೯ ಜನರು ಸಾವನ್ನಪ್ಪಿರುವ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬ ಸದಸ್ಯರಿಗೆ ತಲಾ ೪ ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಕಚೇರಿ (ಸಿಎಂಒ) ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಜೆಹಾನಾಬಾದ್ ಜಿಲ್ಲೆಯಲ್ಲಿ ಮೂವರು, ಮಾಧೇಪುರದಲ್ಲಿ ಇಬ್ಬರು, ಪೂರ್ವ ಚಂಪಾರಣ್, ರೋಹ್ಟಾಸ್, ಸರನ್ ಮತ್ತು ಸುಪಾಲ್ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಸಲಹೆಗಳನ್ನು ಅನುಸರಿಸುವಂತೆ ಸಿಎಂ ಜನರನ್ನು ಒತ್ತಾಯಿಸಿದರು.