ಬೆಂಗಳೂರು : ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ಅವರ ಆರ್ಎಸ್ಎಸ್ ನಿಷೇಧದ ಕುರಿತ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಆರ್ಎಸ್ಎಸ್ ಅನ್ನು ಯಾರೂ ಬ್ಯಾನ್ ಮಾಡಿಲ್ಲ, ಯಾರೂ ಬ್ಯಾನ್ ಮಾಡೋಕೆ ಆಗಲ್ಲ ಎಂದು ಅವರು ಹೇಳಿದ್ದಾರೆ. ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ ಪ್ರಸ್ತಾಪಿಸಿದ್ದನ್ನು ಉಲ್ಲೇಖಿಸಿದ ಅವರು, ಸಂಘಟನೆ ನಿಷೇಧಕ್ಕೂ ಮತ್ತು ಚಟುವಟಿಕೆ ನಿರ್ಬಂಧಕ್ಕೂ ವ್ಯತ್ಯಾಸವಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಸರ್ಕಾರವಾಗಲೀ ಅಥವಾ ಯಾವುದೇ ಸರ್ಕಾರವಾಗಲೀ ಆರ್ಎಸ್ಎಸ್ ಅನ್ನು ನಿಷೇಧಿಸುವ ಬಗ್ಗೆ ಎಲ್ಲೂ ಹೇಳಿಲ್ಲ. ಇದು ಅನಗತ್ಯ ಚರ್ಚೆ ಎಂದು ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
ಆರ್ಎಸ್ಎಸ್ ಬ್ಯಾನ್ ಪ್ರಶ್ನೆಯೇ ಇಲ್ಲ ಎಂದ ಜಾರಕಿಹೊಳಿ
RELATED ARTICLES



