Tuesday, March 10, 2026
Google search engine

Homeಸ್ಥಳೀಯಆರೋಗ್ಯ ಇಲಾಖೆಯ ನೌಕರರ ಮುಷ್ಕರಕ್ಕೆ ಬೆಂಬಲ ಕೋರಿ ಶಾಸಕ ಡಿ.ರವಿಶಂಕರ್ ಗೆ ಮನವಿ

ಆರೋಗ್ಯ ಇಲಾಖೆಯ ನೌಕರರ ಮುಷ್ಕರಕ್ಕೆ ಬೆಂಬಲ ಕೋರಿ ಶಾಸಕ ಡಿ.ರವಿಶಂಕರ್ ಗೆ ಮನವಿ

ವರದಿ : ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಕಲ್ಯಾಣ ಇಲಾಖೆಯ ಅಧಿಕಾರಿ ಹಾಗೂ ಇನ್ನಿತರ ನೌಕರರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಾ. 11ರಂದು ಕೈಗೊಳ್ಳುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ನೀಡಬೇಕೆಂದು ಶಾಸಕ ಡಿ.ರವಿಶಂಕರ್ ಅವರಿಗೆ ಕೆ.ಆರ್.ನಗರ- ಸಾಲಿಗ್ರಾಮ ತಾಲೂಕು ಆರೋಗ್ಯ ಇಲಾಖೆಯಿಂದ ಮನವಿ ಮಾಡಲಾಯಿತು.

ಸೋಮವಾರ ಸಾಲಿಗ್ರಾಮ ತಾಲೂಕಿನ ಹಾಡ್ಯ ಗೇಟ್ ನಲ್ಲಿ ನಡೆದ ರಸ್ತೆ ಅಭಿವೃದ್ದಿ ಕಾಮಗಾರಿ ಚಾಲನೇ ವೇಳೆ ಕೆ.ಆರ್.ನಗರ – ಸಾಲಿಗ್ರಾಮ ತಾಲೂಕು ಆರೋಗ್ಯಾಧಿಕಾರಿ ಡಾ‌. ನಟರಾಜು ಅವರ ನೇತೃತ್ವದಲ್ಲಿ ಶಾಸಕ ಡಿ.ರವಿಶಕರ್ ಅವರನ್ನು ಬೇಟಿ ಮಾಡಿ ತಮ್ಮ ಇಲಾಖೆಯ ವತಿಯಿಂದ ಹಮ್ಮಿ ಕೊಂಡಿರುವ ಮನವಿ ಪತ್ರವನ್ನು ನೀಡಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸುವಂತೆ ಕೋರಿದರು.

ಆರೋಗ್ಯ ಇಲಾಖೆಯಲ್ಲಿ 36,397 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ವೃಂದಗಳಲ್ಲಿ ಒಟ್ಟು ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜ್ಯದ 6 ಕೋಟಿ ಜನರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರಸ್ತುತ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರ ಸಂಖ್ಯೆವಯೋನಿವೃತ್ತಿ ಮತ್ತು ಇತರ ಕಾರಣಗಳಿಂದ ಕಡಿಮೆಯಾಗುತ್ತಿದೆ. ಖಾಲಿ ಹುದ್ದೆ ಭರ್ತಿ ಆಗದೇ ಇರುವುದರಿಂದ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರ ಮೇಲೆ ಹೆಚ್ಚಿನ ಕಾರ್ಯದೊತ್ತಡ ಉಂಟಾಗುತ್ತಿದೆ ಎಂದು ರವಿಶಂಕರ್ ಅವರ ಗಮನಕ್ಕೆ ತಂದರು.

ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ವಿವಿಧ ವೃಂದಗಳ ಕೇಂದ್ರ ಸಂಘವು ಇಲಾಖಾ ನೌಕರರ ವಿವಿಧ ಬೇಡಿಕೆಗಳನ್ನು ಈ ಹಿಂದೆ ಮನವಿ ಸಲ್ಲಿಸಿದ್ದರೂ ಪರಿಗಣನೆಗೆ ತೆಗೆದುಕೊಂಡಿಲ್ಲ. ಇಲಾಖೆಯ ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ನಡೆದ ಕೆಲವು ಸಭೆಗಳ ಸಭಾ ನಡಾವಳಿಗಳನ್ನು ಸಹ ದಾಖಲಿಸದೇ ಇಲಾಖೆಯ ಅಧಿಕಾರಿ ಹಾಗೂ ನೌಕರರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಉನ್ನತ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದು ಖಂಡಿಸಿ ಮಾ. 11ರಂದು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲ ಕಾಲಕ್ಕೆ ಸಮರ್ಪಕವಾಗಿ ಇಲಾಖೆಯಿಂದ ಔಷಧಿಗಳನ್ನು ಸರಬರಾಜು ಮಾಡದೆ ಇರುವುದು, ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಲು ಸರ್ಕಾರಿ ಆದೇಶ ಇದ್ದಾಗ್ಯೂ ಉಲ್ಲಂಘಿಸಿ 1973ರಿಂದ ಈವರೆಗೂ ಆರೋಗ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ ಎಂದು ತಿಳಿಸಿದರು.

ಮನವಿ ಸ್ವೀಕರಿಸಿದ ಶಾಸಕ ಡಿ.ರವಿಶಂಕರ್ ತಮ್ಮ ಬೇಡಿಕೆಗಳನ್ನ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಅರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರ ಗಮನಕ್ಕೆ ತರಲಾಗುವುದು ಅಲ್ಲದೆ ಅಧಿವೇಶನದಲ್ಲಿ ಸರ್ಕಾರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹನಸೋಗೆ ಆರೋಗ್ಯ ಕೇಂದ್ರದ ಡಾ.ಎ.ವಿ.ಸಚಿನ್, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಕೆ ವಿ ರಮೇಶ್, ಸಂಘಟನಾ ಕಾರ್ಯದರ್ಶಿ ಎಸ್.ಎಂ.ಗಂಗಾಧರ್ ತಾಲೂಕು ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳ ಸಂಘದ ಅಧ್ಯಕ್ಷೆ ಆರ್.ಭವ್ಯಾ, ಹಿರಿಯ ಆರೋಗ್ಯ ನೀರಿಕ್ಷಕರಾದ ಹೇಮೆಶ್ , ಬಿ.ಆರ್.ಚಂದ್ರು , ಫಾರ್ಮಸಿ ರೋಹಿತ್ ಇದ್ದರು.

RELATED ARTICLES
- Advertisment -
Google search engine

Most Popular