ರಾಮನಗರ:ಗೃಹ ಜ್ಯೋತಿ ಯೋಜನೆಯಿಂದ ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕವಾಗಿ ಪ್ರಗತಿ ಹೊಂದಲು ಸಹಕಾರಿಯಾಗುತ್ತದೆ ಎಂದು ಸಾರಿಗೆ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.
ಅವರು ಇಂದು ರಾಮನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ರಾಮನಗರ ಜಿಲ್ಲೆ, ರಾಮನಗರ ವತಿಯಿಂದ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಗೃಹ ಜ್ಯೋತಿ ಯೋಜನೆಯಡಿ 1 ಕೋಟಿ 40 ಲಕ್ಷಕ್ಕೂ ಹೆಚ್ಚು ಜನ ನೋಂದಾಯಿಸಿಕೊoಡಿರುತ್ತಾರೆ. ಕೆಲ ಗ್ರಾಹಕರು 40-50-100 ಯುನಿಟ್‌ಗಳನ್ನು ಉಪಯೋಗಿಸಿರುತ್ತಾರೆ. ಇನ್ನೂ ಕೆಲವರು 200 ಕ್ಕೂ ಹೆಚ್ಚು ಯುನಿಟ್‌ಗಳನ್ನು ಉಪಯೋಗಿಸಿರುತ್ತಾರೆ ಎಂದರು.
ಶಕ್ತಿ ಯೋಜನೆಯಲ್ಲಿ ಈವರೆಗೆ 32 ಕೋಟಿ ಜನ ಬಸ್ಸಿನಲ್ಲಿ ಪ್ರಯಾಣಿಸಿರುತ್ತಾರೆ. ಈ ಹಿಂದ ಪ್ರತಿ ದಿನ 83 ಲಕ್ಷ ಜನ ಮಾತ್ರ ಪ್ರಯಾಣಿಸಿರುತ್ತಾರೆ. ಅನ್ನ ಭಾಗ್ಯ ಯೋಜನೆಯಡಿ ಮೊದಲು 7 ಕೆ.ಜಿ ಅಕ್ಕಿಯನ್ನು ನೀಡಲಾಗುತ್ತಿತ್ತು. ನಂತರ ಬಂದ ಸರ್ಕಾರ 5 ಕೆ.ಜಿಗೆ ಇಳಿಸಿತ್ತು. ಇದನ್ನೇ ನಾವು ಈಗ 10 ಕೆ.ಜಿ ಅಕ್ಕಿ ಕೊಡಲು ಯೋಜನೆಯನ್ನು ಜಾರಿಗೆ ತರಲಾಗಿದೆ. ಕೇಂದ್ರದ ಬಳಿ 130 ಲಕ್ಷ ಮೆಟ್ರಿಕ್ ಟನ್ ಅಕ್ಕಿಯಿದ್ದು, ಅದನ್ನು ರಾಜ್ಯಕ್ಕೆ ನೀಡುತ್ತಿಲ್ಲ ಈಗಾಗಿ 5 ಕೆ.ಜಿ ಅಕ್ಕಿ ಹಾಗೂ ಪ್ರತಿ 1 ಕೆ.ಜಿ ಗೆ 34 ರೂ.ಗಳಂತೆ 5 ಕೆ.ಜಿ ಗೆ ತಗಲುವ ಮೊತ್ತವನ್ನು ಡಿ.ಬಿ.ಟಿ ಮೂಲಕ ವರ್ಗಾಹಿಸಲಾಗುತ್ತಿದೆ ಎಂದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯರಾದ ಡಿ.ಕೆ. ಸುರೇಶ್ ಅವರು ಮಾತನಾಡಿ, ಕರ್ನಾಟಕದಲ್ಲಿ ವಾಸಿಸುತ್ತಿರುವ ಪ್ರತಿ ಮನೆಗಳಲ್ಲೂ ಸಹ ಗೃಹ ಜ್ಯೋತಿ ಯೋಜನೆ ಪ್ರಾರಂಭವಾಗಿದೆ ಎಂದು ತಿಳಿಸಿದರು.
ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿಗಳು ವಿದ್ಯುಕ್ತವಾಗಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಸಹ ಇಂದೇ ಚಾಲನೆ ನೀಡಲಾಗಿದೆ. ಈ ಯೋಜನೆಯಿಂದ ಬಡವರು, ದೀನ ದಲಿತರಿಗೆ ಅನುಕೂಲವಾಗಲಿದೆ ಎಂದರು.
ವಿವಿಧ ಸಾರಿಗೆ ನಿಗಮದಿಂದ 258 ಕೋಟಿ ರೂ.ಗಳ ಬಿಲ್ ಪಾವತಿಸುವಂತೆ ಸರ್ಕಾರವನ್ನು ಕೋರಿರುತ್ತಾರೆ. ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ದೇವಾಲಯ ಹಾಗೂ ಬೇರೆ ರೀತಿಯಿಂದ 2 ಸಾವಿರ ಕೋಟಿ ಆದಾಯ ಬಂದಿರುತ್ತದೆ ಎಂದರು.
ಜಿಲ್ಲೆಯಲ್ಲಿ ಶೇ. 95 ರಷ್ಟು ಜನರಿಗೆ ಗೃಹ ಜ್ಯೋತಿ ಯೋಜನೆ ತಲುಪಲಿದೆ. ಈಗಾಗಲೇ ಶೇ. 79 ರಷ್ಟು ಜನ ಈ ಯೋಜನೆಯಡಿ ನೋಂದಾಯಿಸಿಕೊAಡಿದ್ದಾರೆ. ಈ ಯೋಜನೆಯಿಂದ ನಿಮ್ಮೆಲ್ಲರ ಬಾಳಿನಲ್ಲಿ ಜ್ಯೋತಿ ಬೆಳಗಲಿದ್ದು, ಅಲ್ಲದೇ ಜನರ ಆರ್ಥಿಕ ಸುಧಾರಣೆಯಾಗಲಿದೆ ಎಂದರು.
ಸಭೆಯಲ್ಲಿ ಸಂಸದ ಡಿ.ಕೆ.ಸುರೇಶ್, ಡಿಸಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್, ಸಿಇಒ ದಿಗ್ವಿಜಯ್ ಬೋಡ್ಕೆ, ಎಸ್.ಪಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
