Thursday, March 12, 2026
Google search engine

Homeರಾಜ್ಯಸುದ್ದಿಜಾಲಗೃಹಬಳಕೆ ಅಡುಗೆ ಅನಿಲದ ಕುರಿತು ಆತಂಕ ಬೇಡ : ಡಾ.ಕುಮಾರ

ಗೃಹಬಳಕೆ ಅಡುಗೆ ಅನಿಲದ ಕುರಿತು ಆತಂಕ ಬೇಡ : ಡಾ.ಕುಮಾರ

ಮಂಡ್ಯ : ಗೃಹ ಬಳಕೆ ಅಡುಗೆ ಅನಿಲದ ಪೂರೈಕೆಯ ಕುರಿತು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಜಿಲ್ಲೆಯಲ್ಲಿ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಮಧ್ಯ ಪ್ರಾಚ್ಯ ಪ್ರದೇಶಗಳಲ್ಲಿ ಯುದ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾಗಿರುವ ಬಿಕ್ಕಟಿನಿಂದ ಗೃಹಬಳಕೆಯ ಅಡುಗೆ ಅನಿಲದ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬ ಆತಂಕ ಇರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೈಲ ಸರಬರಾಜು ಕಂಪನಿಗಳಾದ ಎಚ್ ಪಿ.ಸಿ.ಎಲ್, ಬಿ.ಪಿ.ಸಿ.ಎಲ್, ಐ.ಓ.ಸಿ.ಎಲ್ ದೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಗೃಹಬಳಕೆಯ ಸಿಲಿಂಡರ್ ಸರಬರಾಜಿನಲ್ಲಿ ಪ್ರಸ್ತುತ ಯಾವುದೇ ಕೊರತೆ ಇಲ್ಲ ಎಂದು ಹೇಳಿದರು.

ಜಿಲ್ಲೆಯಲ್ಲಿ ಗೃಹಬಳಕೆಗಾಗಿ ಪ್ರತಿನಿತ್ಯ 12000 ಸಾವಿರ ಸಿಲಿಂಡರ್ ಗಳ ಅಗತ್ಯವಿದ್ದು ಹಾಗೂ ಮಾಸಿಕ 3 ಲಕ್ಷಕ್ಕೂ ಅಧಿಕ ಸಿಲಿಂಡರ್ ಗಳ ಅಗತ್ಯವಿದೆ. ಇದರಂತೆ ಪ್ರತಿನಿತ್ಯ ಅಗತ್ಯವಿರುವ ಸಿಲಿಂಡರ್ಗಳ ಪೂರೈಕೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಸಾರ್ವಜನಿಕರು ಗೃಹಬಳಕೆ ಅನಿಲದ ಕೊರತೆ ಉಂಟಾಗುತ್ತದೆ ಎಂದು ಭಾವಿಸಿ ಮುಂಗಡವಾಗಿ ಅನಿಲ ಬುಕ್ಕಿಂಗ್ ಮಾಡಲಾಗುತ್ತಿದೆ. ಸಾರ್ವಜನಿಕರು ಆತಂಕ ಪಡೆದೆ ಮುಂಗಡವಾಗಿ ಸಿಲಿಂಡರ್ ಬುಕ್ಕಿಂಗ್ ಮಾಡುವ ಅವಶ್ಯಕತೆ ಇಲ್ಲ. ಜಿಲ್ಲೆಯಲ್ಲಿ ಸದ್ಯಕ್ಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ದಕ್ಕೆ ಇರುವುದಿಲ್ಲ ಎಂದು ಖಚಿತಪಡಿಸಿದರು.

ಜಿಲ್ಲೆಯಲ್ಲಿ ಅಡುಗೆ ಅನಿಲವನ್ನು ಅಕ್ರಮವಾಗಿ ಸಂಗ್ರಹಿಸುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಅಂಥವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ರಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಾಣಿಜ್ಯ ಅಡುಗೆ ಅನಿಲ ಬಳಕೆಗೆ ಸಂಬಂಧಿಸಿದಂತೆ ಅಂದರೆ ಹೋಟೆಲ್, ರೆಸ್ಟೋರೆಂಟ್, ಕೈಗಾರಿಕೆಗಳ ಗಳಕೆ ಸಧ್ಯಕ್ಕೆ ಅಡುಗೆ ಅನಿಲದ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿರುತ್ತದೆ. ಆದರೆ ಗೃಹಬಳಕೆ ಅಡುಗೆ ಅನಿಲದ ಪೂರೈಕೆಗೆ ಸಂಬಂಧಿಸಿದಂತೆ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಹೇಳಿದರು.

ಆಸ್ಪತ್ರೆಗಳು, ಶಾಲೆಗಳು, ವಸತಿ ಶಾಲೆಗಳು, ವಿದ್ಯಾರ್ಥಿ ನಿಲಯಗಳು ಮತ್ತು ಅಂಗನವಾಡಿಗಳು ಸೇರಿದಂತೆ ಮುಂತಾದ ಅಗತ್ಯ ಸೇವಾ ಸಂಸ್ಥೆಗಳಿಗೆ ಅಡುಗೆ ಅನಿಲದ ಕೊರತೆ ಉಂಟಾಗದಂತೆ ನೋಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು .

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಕೆ.ಆರ್ ನಂದಿನಿ ಮಾತನಾಡಿ ಮಾರ್ಚ್ ಏಪ್ರಿಲ್ ಮಾಹೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗದಂತೆ ಹಾಸ್ಟೆಲ್ ಹಾಗೂ ವಸತಿ ನಿಲಯಗಳು ಶಾಲೆಗಳಿಗೆ ಅಡುಗೆ ಅನಿಲವನ್ನು ಪೂರೈಕೆ ಮಾಡಿ ಎಂದು ಹೇಳಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ, ಮಿಮ್ಸ್ ನಿರ್ದೇಶಕ ನರಸಿಂಹ ಸ್ವಾಮಿ, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ , ತೈಲ ಸರಬರಾಜು ಕಂಪನಿಗಳ ಪ್ರತಿನಿಧಿಗಳು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular