Thursday, March 12, 2026
Google search engine

Homeಬ್ರೇಕಿಂಗ್ ನ್ಯೂಸ್ಜಿಲ್ಲಾ ಆರೋಗ್ಯಾಧಿಕಾರಿಯಿಂದ ಕೇಸರಿ ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ; ಫೋಟೋ ವೈರಲ್

ಜಿಲ್ಲಾ ಆರೋಗ್ಯಾಧಿಕಾರಿಯಿಂದ ಕೇಸರಿ ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ; ಫೋಟೋ ವೈರಲ್

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರ್ ಸಂಘ(ಬಿಎಂಎಸ್)ವು ಬಂಟ್ವಾಳದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಅವರು ಭಗವಾಧ್ವಜ((ಕೇಸರಿ)) ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಉದ್ಘಾಟಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಈ ಕಾರ್ಯಕ್ರಮದ ಫೋಟೊ ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಬಿಎಂಎಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ವೇದಿಕೆ ಹಂಚಿಕೊಳ್ಳುವ ಮೂಲಕ ಸರಕಾರಿ ಸೇವಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

RELATED ARTICLES
- Advertisment -
Google search engine

Most Popular