ಮಂಡ್ಯ:ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ಸ್ಥಳ ಬಲಮುರಿಗೆ ಕುಟುಂಬದ ಜೊತೆಗೆ ಪ್ರವಾಸಕ್ಕೆ ಬಂದಿದ್ದ ಕೋಲಾರ ಮೂಲದ ಯುವಕ ಯಶ್ವಂತ್(25) ನದಿಯಲ್ಲಿ ಈಜಲು ಹೋಗಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವಿಗಿಡಾಗಿದ್ದಾನೆ. ಸ್ಥಳಕ್ಕೆ ಕೆಆರ್‌ಎಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನದಿಯಿಂದ ಯುವಕನ ಶವವನ್ನು ಸ್ಥಳೀಯ ಈಜುಗಾರರ ನೆರವಿನಿಂದ ಹೊರ ತೆಗೆಯಲಾಗಿದ್ದು ,ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.