Monday, March 16, 2026
Google search engine

Homeರಾಜ್ಯಮಾರ್ಚ್ 17 :ವಿಶ್ವ ಗ್ರಾಹಕರ ದಿನಾಚರಣೆ

ಮಾರ್ಚ್ 17 :ವಿಶ್ವ ಗ್ರಾಹಕರ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ,  ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ) ದ.ಕ. ಜಿಲ್ಲೆ, ಮಂಗಳೂರು ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ದ.ಕ. ಜಿಲ್ಲೆ, ಮಂಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯ ವಿಲೇವಾರಿ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ  ಮಾರ್ಚ್ 17 ರಂದು ಬೆಳಿಗ್ಗೆ 10.30 ಗಂಟೆಗೆ  ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಡಾ. ರಾಧಾಕೃಷ್ಣ ಹಾಲ್‍ನಲ್ಲಿ ನಡೆಯಲಿದೆ.
     ಜಿಲ್ಲಾ ಗ್ರಾಹಕರ ವ್ಯಾಜ್ಯ ವಿಲೇವಾರಿ ಆಯೋಗದ ಅಧ್ಯಕ್ಷ ಸೋಮಶೇಖರಪ್ಪ ಕೆ.ಎಚ್. ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ  ದರ್ಶನ್ ಎಚ್.ವಿ. ಅಧ್ಯಕ್ಷತೆ ವಹಿಸಲಿದ್ದಾರೆ.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular