Tuesday, March 17, 2026
Google search engine

Homeರಾಜ್ಯಗ್ರಾಮೀಣ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ : ಸಚಿವ ಶರಣಪ್ರಕಾಶ್ ಪಾಟೀಲ್ ಭರವಸೆ

ಗ್ರಾಮೀಣ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ : ಸಚಿವ ಶರಣಪ್ರಕಾಶ್ ಪಾಟೀಲ್ ಭರವಸೆ

ಬೆಂಗಳೂರು : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡುವುದಾಗಿ ವೈದ್ಯಕೀಯ ಶಿಕ್ಷಣ, ಸಚಿವ ಡಾ.ಶರಣಪ್ರಕಾಶ್.ಆರ್.ಪಾಟೀಲ್ ಅವರು ಹೇಳಿದ್ದಾರೆ.

ವಿಧಾನಪರಿಷತ್‌ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾ ಅವರು, ನೀಟ್ ವ್ಯವಸ್ಥೆಯಿಂದ ಗ್ರಾಮೀಣ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆಂದು ಕಳವಳ ವ್ಯಕ್ತಪಡಿಸಿದರಲ್ಲದೆ, ಗ್ರಾಮೀಣ ಬಡ ವಿದ್ಯಾರ್ಥಿಗಳು ರೂ.3 ಲಕ್ಷ ಸಹಾಯದಿಂದ ಕೋಚಿಂಗ್ ಪಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೀಟ್ ವ್ಯವಸ್ಥೆಯು ರಾಜ್ಯದ ಸೀಟುಗಳಲ್ಲಿ ಯಾವುದೇ ಕೊರತೆಯನ್ನು ಉಂಟುಮಾಡಿಲ್ಲ ಅಥವಾ ಸೀಟುಗಳ ಸಂಖ್ಯೆಯೂ ಕಡಿಮೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದು, ನೀಟ್ ವ್ಯವಸ್ಥೆಯನ್ನು ರದ್ದುಗೊಳಿಸಲು ನಿರ್ಧರಿಸಿದ್ದರೂ, ಸುಪ್ರೀಂ ಕೋರ್ಟ್ ಅದರ ಪರವಾಗಿ ತೀರ್ಪು ನೀಡಿದೆ. ಆದ್ದರಿಂದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚು ಪರಿಣಾಮಕಾರಿ ನೀಟ್ ಪರೀಕ್ಷಾ ತರಬೇತಿಯನ್ನು ಒದಗಿಸಲು ಸರ್ಕಾರ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.

RELATED ARTICLES
- Advertisment -
Google search engine

Most Popular