Tuesday, March 17, 2026
Google search engine

Homeಅಪರಾಧಗೋಕುಲ್ ಚಿತ್ರಮಂದಿರದಲ್ಲಿ ಅಗ್ನಿ ಅವಘಡ: ವಾಚ್‌ಮನ್ ಸಜೀವ ದಹನ

ಗೋಕುಲ್ ಚಿತ್ರಮಂದಿರದಲ್ಲಿ ಅಗ್ನಿ ಅವಘಡ: ವಾಚ್‌ಮನ್ ಸಜೀವ ದಹನ

ಮೈಸೂರು: ನಗರದ ಕೆ.ಆರ್.ಎಸ್ ರಸ್ತೆಯಲ್ಲಿರುವ ಸ್ಥಗಿತಗೊಂಡ ಗೋಕುಲ್ ಚಿತ್ರಮಂದಿರದ ಆವರಣದಲ್ಲಿ ನಡೆದ ಅಗ್ನಿ ಅವಘಡದಲ್ಲಿ ವಾಚ್‌ಮನ್ ಮರಿಶೆಟ್ಟಿ (75) ಸಜೀವ ದಹನಗೊಂಡ ದುರ್ಘಟನೆ ಸಂಭವಿಸಿದೆ. ಅವರು ಸುಮಾರು 45 ವರ್ಷಗಳಿಂದ ಇಲ್ಲಿಯೇ ಸೇವೆ ಸಲ್ಲಿಸುತ್ತಿದ್ದರು.

ಮಂಗಳವಾರ ಬೆಳಿಗ್ಗೆ ಸ್ವಚ್ಛತಾ ಕಾರ್ಯದ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅದು ತ್ವರಿತವಾಗಿ ಹಬ್ಬಿದೆ. ಪರಿಣಾಮವಾಗಿ ಮರಿಶೆಟ್ಟಿ ಹೊರಬರಲು ಸಾಧ್ಯವಾಗದೆ ಬೆಂಕಿಗೆ ಆಹುತಿಯಾಗಿದ್ದಾರೆ.

ಮನೆಗೆ ಮರಳದ ಕಾರಣ ಕುಟುಂಬಸ್ಥರು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿವಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

RELATED ARTICLES
- Advertisment -
Google search engine

Most Popular