ಶುಕ್ರವಾರ ರಂಝಾನ್ ಹಬ್ಬದ ಹಿನ್ನೆಲೆಯಲ್ಲಿ ಇಂದು (ಗುರುವಾರ) ಮಧ್ಯರಾತ್ರಿ 12 ಗಂಟೆ ತನಕ ಅಂಗಡಿ ಮುಂಗಟ್ಟುಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಗುರುವಾರ ಮಧ್ಯರಾತ್ರಿವರೆಗೆ ಅಂಗಡಿಗಳನ್ನು ತೆರೆದಿಡಲು ಹಲವರು ಮನವಿ ಮಾಡಿದ್ದರು. ಅದರಂತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದು (ಗುರುವಾರ) ಮಧ್ಯರಾತ್ರಿ 12 ಗಂಟೆಯ ತನಕ ಅಂಗಡಿಗಳನ್ನು ತೆರೆದಿಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಶಂಶೀರ್ ಬುಡೋಳಿ



