Monday, March 23, 2026
Google search engine

Homeರಾಜ್ಯಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಶಕ್ತಿ ಪ್ರದರ್ಶನದ ನಡುವೆ ನಾಮಪತ್ರ ಸಲ್ಲಿಕೆ

ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಶಕ್ತಿ ಪ್ರದರ್ಶನದ ನಡುವೆ ನಾಮಪತ್ರ ಸಲ್ಲಿಕೆ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬಾಗಲಕೋಟೆ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ, ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ ನಂಜಯ್ಯನಮಠ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದ್ದು, ಬಾಗಲಕೋಟೆ ಎಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಉಮೇಶ್ ಮೇಟಿ ಅವರು ಹೊಳೆ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ರಾಘವೇಂದ್ರ ರಾಯರ ಮಠಕ್ಕೆ ಭೇಟಿ, ದರ್ಶನ ಪಡೆದು, ಆನಂತರ ದಿವಂಗತ ತಂದೆ ಹೆಚ್.ವೈ.ಮೇಟಿ ಅವರ ಸಮಾಧಿಗೆ ತೆರಳಿ, ಆಶೀರ್ವಾದ ಪಡೆದಕೊಂಡರು. ಹೈಚ್‌ವೈ ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆಯಲಿದ್ದು, ಮೇ 4ಕ್ಕೆ ಫಲಿತಾಂಶ ಹೊರಬೀಳಲಿದೆ.

RELATED ARTICLES
- Advertisment -
Google search engine

Most Popular