Friday, March 27, 2026
Google search engine

Homeಅಪರಾಧಮಾರಕಾಸ್ತ್ರಗಳಿಂದ ಕಡಿದು ರೌಡಿಶೀಟರ್ ನ ಹತ್ಯೆ

ಮಾರಕಾಸ್ತ್ರಗಳಿಂದ ಕಡಿದು ರೌಡಿಶೀಟರ್ ನ ಹತ್ಯೆ

ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್‌ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ತಕ್ಷಣವೇ, ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.
ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular