Friday, March 27, 2026
Google search engine

Homeರಾಜಕೀಯರಾಜ್ಯ ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ : ಸಿಎಂ ಸಿದ್ದರಾಮಯ್ಯ ಸಮರ್ಥನೆ

ರಾಜ್ಯ ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ : ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು : ರಾಜ್ಯ ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಬಜೆಟ್‌ ಕುರಿತ ಚರ್ಚೆಯಲ್ಲಿ ಮಾತನಾಡಿದ ಅವರು, ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದೆ ಇರಲು ಸಾಧ್ಯವಿಲ್ಲ, ಜನ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಸಾಲ ಮಾಡಬೇಕು. ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ. ನಮ್ಮ ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದು ತಿಳಿಸಿದರು.

ನಾನು ಎಂದೂ ಸಾಲ ಮಾಡಬಾರದು ಎಂದು ಹೇಳಿಲ್ಲ. ಹೇಳುವುದೂ ಇಲ್ಲ. ಆದರೆ ಮಾಡುವ ಸಾಲ ಜನರ ಕಲ್ಯಾಣಕ್ಕಾಗಿ ಮತ್ತು ನಾಡಿನ ಅಭಿವೃದ್ಧಿಗಾಗಿ ಬಳಕೆಯಾಗಿದೆಯೇ ಎಂಬುದು ಮುಖ್ಯ ಎಂದು ಹೇಳಿದರು.

ಇನ್ನೂ 2008 ರಿಂದ 2013 ರವರೆಗೆ ಇದ್ದ ಬಿಜೆಪಿಯೂ ಸಾಲ ಮಾಡಿದೆ. ಆದರೆ, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಲ್ಲ, ಅಭಿವೃದ್ಧಿಯೂ ಶೂನ್ಯ. ಹಾಗಿದ್ರೂ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಲ ಮಾಡಿದ್ದು ಏಕೆ? ಎಂದು ಪ್ರಶ್ನಿಸಿದರು.

RELATED ARTICLES
- Advertisment -
Google search engine

Most Popular