Friday, March 27, 2026
Google search engine

Homeರಾಜ್ಯಹರೇಕಳ ಹಾಜಬ್ಬ ಸೇರಿ ಮೂವರಿಗೆ ಮಂಗಳೂರು ವಿವಿಯ ಗೌರವ ಡಾಕ್ಟರೇಟ್

ಹರೇಕಳ ಹಾಜಬ್ಬ ಸೇರಿ ಮೂವರಿಗೆ ಮಂಗಳೂರು ವಿವಿಯ ಗೌರವ ಡಾಕ್ಟರೇಟ್

ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಇತ್ತೀಚೆಗೆ ನಿಧನರಾದ ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ರವೀಶ್ ಪಡುಮಲೆಯವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಕೊಣಾಜೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಾ.28ರಂದು ಬೆಳಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular