Friday, March 27, 2026
Google search engine

Homeರಾಜ್ಯಶಿಕ್ಷಣ ಸಂಸ್ಥೆಗಳ ಬಳಿ ಅಂಗಡಿಗಳಲ್ಲಿ ಧೂಮಪಾನ ಮಾರಿದರೆ ಲೈಸನ್ಸ್ ರದ್ದುಗೊಳಿಸಲು ಸೂಚನೆ

ಶಿಕ್ಷಣ ಸಂಸ್ಥೆಗಳ ಬಳಿ ಅಂಗಡಿಗಳಲ್ಲಿ ಧೂಮಪಾನ ಮಾರಿದರೆ ಲೈಸನ್ಸ್ ರದ್ದುಗೊಳಿಸಲು ಸೂಚನೆ

ಜಿಲ್ಲೆಯಲ್ಲಿ ಶಾಲಾ – ಕಾಲೇಜುಗಳ ಸನಿಹದಲ್ಲಿರುವ ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಸಿಗರೇಟ್, ತಂಬಾಕು ಸೇರಿದಂತೆ ಧೂಮಪಾನ ಮತ್ತು ಮಾದಕ ವಸ್ತುಗಳನ್ನು ಮಾರಾಟ ಕಂಡುಬಂದಲ್ಲಿ ಅಂತಹ ಅಂಗಡಿಗಳ ಲೈಸನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಸೂಚಿಸಿದ್ದಾರೆ.
  ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಕೇಂದ್ರ ಸಮಿತಿ ಸಭೆಯಲ್ಲಿ ಮಾತನಾಡಿದರು. ಶಾಲಾ ಪರಿಸರದಲ್ಲಿ ಯಾವುದೇ ಧೂಮಪಾನ ಅಥವಾ ಮಾದಕ ವಸ್ತುಗಳ ಚಟುವಟಿಕೆ ನಡೆಯದಿರುವ ಬಗ್ಗೆ ಎಲ್ಲ ಶಾಲಾ ಎಸ್‍ಡಿಎಂಸಿಗಳು ಪರಿಶೀಲಿಸಿದ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯು ವರದಿ ಪಡೆಯಬೇಕು ಎಂದರು.
  ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಆಗ್ಗಿಂದಾಗೆ ನಡೆಸಬೇಕು. ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸಾರ್ವಜನಿಕರಲ್ಲಿ  ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಆಗ್ಗಿಂದಾಗೆ ನಡೆಸಬೇಕು. ಹೋಂ ಸ್ಟೇ ಮತ್ತು ಲಾಡ್ಜ್‍ಗಳಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸಬೇಕು. ಕರಾವಳಿ ಭದ್ರತಾ ಪೆÇಲೀಸರು ಬೋಟ್‍ಗಳನ್ನು ಅನಿರೀಕ್ಷಿತ ತಪಾಸಣೆ ನಡೆಸಬೇಕು.  ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ಪಾರ್ಸೆಲ್‍ಗಳ ಮೇಲೆ ನಿಗಾ ವಹಿಸಬೇಕು ಎಂದು ಅವರು ಸೂಚಿಸಿದರು.
  ಕೈಗಾರಿಕಾ ಘಟಕಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಬೇಕು. ರೈಲ್ವೆ ಮತ್ತು ವಿಮಾನ ನಿಲ್ದಾಣಗಳಲ್ಲಿ ನಿಗಾವಹಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಸೂಚಿಸಿದರು.
   ಡ್ರಗ್ಸ್ ಸೇರಿದಂತೆ ವಿವಿಧ ಮಾದಕ ವಸ್ತುಗಳ ಚಟಕ್ಕೆ ಬಿದ್ದ ಮಕ್ಕಳನ್ನು ಅದರಿಂದ ಹೊರಗೆ ತರಲು ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೌನ್ಸಿಲಿಂಗ್ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಇಲ್ಲಿಗೆ ಕರೆತರಬಹುದಾಗಿದೆ ಎಂದು ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.
   ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಮಿಥುನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂಥ್ ಮತ್ತಿತರರು ಇದ್ದರು.

RELATED ARTICLES
- Advertisment -
Google search engine

Most Popular