ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:152/2017 ಕಲಂ 379 r/w 34 IPC ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಕೇರಳ ಪಲಕ್ಕಾಡ್ ನಿವಾಸಿ ಶಕೀಲ್ ಪಿ (43) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಎಚ್ ಸಿ 314 ನೇ ಸಂತೋಷ್ ಪಿಸಿ 2462 ನೇ ಶಿವಾನಂದ ಮಡ್ಡಿ ಅವರು ಮಾಹಿತಿ ಸಂಗ್ರಹಿಸಿ ಕೇರಳ ತಿರೂರ್ ಎಂಬಲ್ಲಿ ದಸ್ತಗಿರಿ ಮಾಡಿ ಎಸಿಜೆ & ಜೆ ಎಂ ಎಫ್ ಸಿ ನ್ಯಾಯಾಲಯ ಬಂಟ್ವಾಳ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
RELATED ARTICLES



