Saturday, April 19, 2025
Google search engine

Homeಸ್ಥಳೀಯಅರಮನೆ ಹೊರಾಂಗಣದಲ್ಲಿ ಡ್ರೋನ್ ಕ್ಯಾಮೆರಾ ಬಳಕೆಗೆ ಪೂರ್ವಾನುಮತಿ ಕಡ್ಡಾಯ

ಅರಮನೆ ಹೊರಾಂಗಣದಲ್ಲಿ ಡ್ರೋನ್ ಕ್ಯಾಮೆರಾ ಬಳಕೆಗೆ ಪೂರ್ವಾನುಮತಿ ಕಡ್ಡಾಯ

ಮೈಸೂರು:  ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್ ಕ್ಯಾಮೆರಾ ಬಳಕೆಗೆ ನಿರ್ಬಂಧ ವಿಧಿಸಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಈ ಬಗ್ಗೆ‌ ಅರಮನೆ ಮಂಡಳಿ ಉಪ ನಿರ್ದೇಶಕ ಟಿ ಎಸ್ ಸುಬ್ರಮಣ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅರಮನೆಯ ಸುತ್ತಮುತ್ತ ಪ್ರದೇಶ ಹಳದಿ ವಲಯ ಎಂದು ಘೋಷಣೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಅರಮನೆಯ ಹೊರಾಂಗಣದಲ್ಲಿ ಡ್ರೋನ್ ಕ್ಯಾಮೆರಾ ಬಳಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ಪ್ರದೇಶದಲ್ಲಿ ಡ್ರೋನ್  ಕ್ಯಾಮರಾವನ್ನು ಬಳಸಲು ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯುವುದು ಅವಶ್ಯಕವಾಗಿದೆ.  ಡ್ರೋನ್ ಕ್ಯಾಮೆರಾ ಬಳಸಲು ಅನುಮತಿ ಪಡೆಯದೆ ಇದ್ದರೆ ಕ್ರಮವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular