ಬೆಂಗಳೂರು : ಪೋಕ್ಸೋ ಕಾಯ್ದೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣದ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ.
ಕಡ್ಡಾಯವಾಗಿ ವರದಿ ಮತ್ತು ಕ್ರಮದ ಬಗ್ಗೆ ಮಾರ್ಗಸೂಚಿ ಪ್ರಕಟ ಮಾಡಿದ್ದು, ಎಲ್ಲಾ ಆಸ್ಪತ್ರೆಗಳು ಈ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ನಿಯಮಗಳೇನು?
- ಪೋಕ್ಸೋ ಪ್ರಕರಣದ ವಿವರಗಳನ್ನು ಸೂಕ್ತವಾಗಿ ದಾಖಲಿಸಬೇಕು.
- ವೈದ್ಯಕೀಯ ದಾಖಲೆಗಳನ್ನು ಕಾನೂನುಬದ್ಧವಾಗಿ ಸಂಗ್ರಹಿಸಬೇಕು.
- ರೋಗಿಯ ಗೌಪ್ಯತೆಯನ್ನು ಕಾಪಾಡಬೇಕು.
- ತನಿಖಾಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು.
- ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ವೈದ್ಯರು ಮತ್ತು ಸಿಬ್ಬಂದಿಗೆ POCSO ಕಾಯಿದೆಯ ವಿಧಿ-ನಿಯಮಗಳ ಬಗ್ಗೆ ಜಾಗೃತಿ ಮೂಡಿಸಬೇಕು.
- ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಕ್ರಮ ಕೈಗೊಳ್ಳಬೇಕು.



