Saturday, April 4, 2026
Google search engine

Homeರಾಜಕೀಯಗ್ಯಾರಂಟಿ ವಿಚಾರದಲ್ಲೂ ಸಿಎಂ ಸಿದ್ದರಾಮಯ್ಯ ಸುಳ್ಳಿನ ಪುಂಗಿ ಊದುತ್ತಲೇ ಇದ್ದಾರೆ : ಆರ್‌.ಅಶೋಕ್

ಗ್ಯಾರಂಟಿ ವಿಚಾರದಲ್ಲೂ ಸಿಎಂ ಸಿದ್ದರಾಮಯ್ಯ ಸುಳ್ಳಿನ ಪುಂಗಿ ಊದುತ್ತಲೇ ಇದ್ದಾರೆ : ಆರ್‌.ಅಶೋಕ್

ದಾವಣಗೆರೆ : ದಾಖಲೆಯ 16 ಬಜೆಟ್ ಮಂಡಿಸಿದ್ದಾಗಿ ಬೀಗುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಣ್ಕಟ್ಟು ವಿದ್ಯೆ ಕಲಿತು, ಅಭಿವೃದ್ಧಿಗೆ ಹಣ ಕೊಡದೆ, ಗ್ಯಾರಂಟಿಗಳನ್ನೂ ಸರಿಯಾಗಿ ಅನುಷ್ಟಾನಗೊಳಿಸದೇ, ಆರ್ಥಿಕ ಶಿಸ್ತು ಪಾಲನೆ ಮಾಡುತ್ತಿರುವುದಾಗಿ ಸುಳ್ಳು ಹೇಳಿ, ಅದೇ ಸುಳ್ಳಿನ ಪುಂಗಿ ಊದುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಟೀಕಿಸಿದ್ದಾರೆ. 

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೇ ಒಂದು ಅಭಿವೃದ್ಧಿ ಕಾರ್ಯವನ್ನೂ ಕೈಗೊಳ್ಳದ ಸಿದ್ದರಾಮಯ್ಯಗೆ ಸುಳ್ಳುರಾಮಯ್ಯನೆಂಬ ಬಿರುದು ಕೊಡಬೇಕಷ್ಟೇ ಎಂದರು. ಇಂದಿರಾ ಕಿಟ್ ಕೊಡುತ್ತೇವೆಂದರು? ಕಿಟ್ ಎಲ್ಲಿ ಕೊಟ್ಟಿದ್ದಾರೆ? ಸಿದ್ದರಾಮಯ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಕೊಡುತ್ತಿರುವುದೇ ಕೇಂದ್ರ ಸರ್ಕಾರ. ಚೀಲ ಮಾತ್ರ ಸಿದ್ದರಾಮಯ್ಯ ಅವರದ್ದು ಎಂದು ವ್ಯಂಗ್ಯವಾಡಿದರು.

ಗ್ಯಾರಂಟಿಗಳ ವಿಚಾರದಲ್ಲೂ ಸಿಎಂ ಸಿದ್ದರಾಮಯ್ಯ ಸುಳ್ಳಿನ ಪುಂಗಿ ಊದುತ್ತಲೇ ಇದ್ದಾರೆ. ಅಷ್ಟು ಸಾಲದ್ದಕ್ಕೆ ತಾವು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ ಅಂತಾ ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನದು ಇನ್ನೇನಿದೆ ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

RELATED ARTICLES
- Advertisment -
Google search engine

Most Popular