Tuesday, April 7, 2026
Google search engine

Homeಕ್ರೀಡೆಐಪಿಎಲ್‌ 2026 ; ಪಾಯಿಂಟ್ಸ್ ಟೇಬಲ್‌ ನಲ್ಲಿ ಭಾರೀ ಬದಲಾವಣೆ : ಅಗ್ರಸ್ಥಾನಕ್ಕೇರಿದ ಪಂಜಾಬ್ ಕಿಂಗ್ಸ್!

ಐಪಿಎಲ್‌ 2026 ; ಪಾಯಿಂಟ್ಸ್ ಟೇಬಲ್‌ ನಲ್ಲಿ ಭಾರೀ ಬದಲಾವಣೆ : ಅಗ್ರಸ್ಥಾನಕ್ಕೇರಿದ ಪಂಜಾಬ್ ಕಿಂಗ್ಸ್!

ಕೋಲ್ಕತ್ತಾ : ಈಡನ್ ಗಾರ್ಡನ್ಸ್ ಮೈದಾನದಲ್ಲಿ ಸೋಮವಾರ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ನಡುವಿನ ಪಂದ್ಯವು ಮಳೆಯಿಂದ ರದ್ದಾಗಿದೆ. ಪಂದ್ಯ ರದ್ದಾದ ಕಾರಣ ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ನೀಡಲಾಗಿದ್ದು, ಇದರೊಂದಿಗೆ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

ಮಳೆಯಿಂದ ರದ್ದಾದ ಪಂದ್ಯ

ಐಪಿಎಲ್ 2026ರ 12ನೇ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ತಂಡದ ಆರಂಭ ಉತ್ತಮವಾಗಿರಲಿಲ್ಲ. ಫಿನ್ ಅಲೆನ್ (6 ರನ್) ಮತ್ತು ಕ್ಯಾಮರೂನ್ ಗ್ರೀನ್ (4 ರನ್) ಬೇಗನೇ ಔಟಾಗಿ ನಿರಾಸೆ ಮೂಡಿಸಿದರು. ಕೆಕೆಆರ್ 3.2 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 25 ರನ್ ಗಳಿಸಿದ್ದಾಗ ಭಾರೀ ಮಳೆ ಆರಂಭವಾಯಿತು. ಸುಮಾರು 3 ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ಮೈದಾನ ಸಂಪೂರ್ಣ ಒದ್ದೆಯಾಗಿದ್ದರಿಂದ ಅಂಪೈರ್‌ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದರು.

ಅಂಕಪಟ್ಟಿಯ ಸ್ಥಿತಿಗತಿ ಹೀಗಿದೆ :

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ತಂಡ 3 ಪಂದ್ಯಗಳಿಂದ 5 ಅಂಕಗಳನ್ನು ಗಳಿಸಿ ಮೊದಲ ಸ್ಥಾನಕ್ಕೇರಿದೆ.

ಆರ್‌ಸಿಬಿ ಮತ್ತು ರಾಜಸ್ಥಾನ: ರಾಯಲ್ ಚಾಲೆಂಜರ್ಸ್ ಬೆಂಗಳೂರು (4 ಅಂಕ) ಎರಡನೇ ಸ್ಥಾನಕ್ಕೆ ಕುಸಿದಿದ್ದರೆ, ರಾಜಸ್ಥಾನ ರಾಯಲ್ಸ್ ಮೂರನೇ ಸ್ಥಾನದಲ್ಲಿದೆ.

ಡೆಲ್ಲಿ ಮತ್ತು ಹೈದರಾಬಾದ್: ಡೆಲ್ಲಿ ಕ್ಯಾಪಿಟಲ್ಸ್ (4 ಅಂಕ) ನಾಲ್ಕನೇ ಸ್ಥಾನದಲ್ಲಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ ಐದನೇ ಸ್ಥಾನದಲ್ಲಿದೆ.

ಕೆಕೆಆರ್ : ಈ ಪಂದ್ಯದ ಮೂಲಕ ಕೆಕೆಆರ್ ಈ ಸೀಸನ್‌ ನ ಮೊದಲ ಅಂಕ ಪಡೆದು 8ನೇ ಸ್ಥಾನಕ್ಕೆ ತಲುಪಿದೆ.

ಸಂಕಷ್ಟದಲ್ಲಿ ದಿಗ್ಗಜ ತಂಡಗಳು :

ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಸೀಸನ್‌ನಲ್ಲಿ ಇನ್ನು ಕೂಡ ಗೆಲುವಿನ ಖಾತೆ ತೆರೆದಿಲ್ಲ. ಆಡಿದ ಎರಡೂ ಪಂದ್ಯಗಳಲ್ಲಿ ಸೋತಿರುವ ಸಿಎಸ್‌ಕೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

RELATED ARTICLES
- Advertisment -
Google search engine

Most Popular